ಬೆಂಗಳೂರು,ಆ.25:
ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಸೆಪ್ಟೆಂಬರ್ ಒಳಗಾಗಿ ಪರೀಕ್ಷೆಗಳನ್ನು ಮುಗಿಸಬೇಕೆಂದು ಸ್ಪಷ್ಟನೆ ನೀಡಿದೆ ಎನ್ನಲಾಗಿದೆ.
ಬರುವ ಅಕ್ಟೋಬರ್ 1 ರಿಂದ ಕೊರೊನಾ ಮುಂಜಾಗ್ರತೆಯೊಂದಿಗೆ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. ಸೆ. 1 ರಿಂದ ಆನ್ ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಮಾಹಿತಿ ರವಾನಿಸಿದೆ ಎನ್ನಲಾಗಿದೆ.
ಈ ಬಗ್ಗೆ ಇನ್ನೂ ಸರ್ಕಾರದ ಅಧಿಕೃತ ಆದೇಶ ಮಾತ್ರ ಬರುವುದು ಬಾಕಿಯಿದೆ. ಆದರೆ ಸದ್ಯಕ್ಕೆ ಶಾಲೆ ಹಾಗೂ ಪಿಯುಸಿ ತರಗತಿಗಳು ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ನಿರ್ದೇಶನ ನೀಡಿದೆಯಂತೆ. ಇಲ್ಲಿ ಯಾರೂ ಈ ಮಾಹಿತಿ ನೀಡುತ್ತಿಲ್ಲ.