ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10 ಸಾವಿರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಿ ಪರೀಕ್ಷೆ ನಡೆಸಿದ್ದು, ಸರಿಸುಮಾರು 10 ಸಾವಿರ ಸಮೀಪದ ಸ್ಯಾಂಪಲ್ಸ್‌ಗಲು ನೆಗಿವಿಟ್ ಬಂದಿವೆ. ನಿನ್ನೆ 12 ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇಂದು ಸಹ ೫ ಪ್ರಕರಣಗಳು ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಅಧಿಕೃತ ವರದಿ ಹೊರಬರಬೇಕಿದೆ.
ಶಿವಮೊಗ್ಗಕ್ಕೆ ಹೊರ ಭಾಗಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಪ್ರಯೋಗಾಲಯಗಳನ್ನು ಹೆಚ್ಚಳ ಮಾಡಲಾಗಿದ್ದು, ಈವರೆಗೂ ೬೫ ಮಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.
ಮೇ.10ರಂದು ಜಿಲ್ಲೆಯಲ್ಲಿ ಮೊದಲ ವೈರಸ್ ಪತ್ತೆಯಾಗಿತ್ತು. ಗುಜರಾತ್ ರಾಜ್ಯದ ಅಹಮದಾಬಾದ್ ನಿಂದ ಜಿಲ್ಲೆಗೆ ಬಂದಿದ್ದ 8 ಮಂದಿಯಲ್ಲಿ ವೈರಸ್ ಪತ್ತೆಯಾಗಿತ್ತು. ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಮತ್ತು ದೇಶದ ಇತರೆ ಭಾಗಗಳಿಂದ ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲಾ ಸರ್ಜನ್ ಡಾ.ರಘುನಂದನ್ ಅವರು ಮಹಾರಾಷ್ಟ್ರದಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪರೀಕ್ಷೆಗಳನ್ನೂ ಹೆಚ್ಚಾಗಿ ನಡೆಸಲಾಗುತ್ತಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಬಹುತೇಕ ಮಂದಿಯನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. ಸಾರಿ ಹಾಗೂ ಐಎಲ್‌ಐ ಲಕ್ಷಣಗಳಿರುವವರನ್ನು ಜನರನ್ನು ಪತ್ತೆ ಹಚ್ಚಲು ಸುಲಭವಾಗುತ್ತಿದೆ. ಕ್ಯಾಸನೂರ್ ಫಾರೆಸ್ಟ್ ಡಿಸೀಸ್ ಡಯಾಗ್ನೋಸ್ಟಿಕ್ ಆ?ಯಂಡ್ ರಿಸರ್ಚ್ ಲ್ಯಾಬೋರೇಟರಿ ಸಹಾಯ ಮಾಡುತ್ತಿದ್ದು, ಪ್ರಯೋಗಾಲಯದಲ್ಲಿ ಈ ವರೆಗೂ 700 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಸುದ್ದಿ ಮೂಲಗಳಿಗೆ ಮಾಹಿತಿ ನೀಡಿದ್ದಾರೆ.
ಈಗಲೂ 200ಕ್ಕೂ ಹೆಚ್ಚು ಜನರ ಫಲಿತಾಂಶ ಹೊರಬರಬೇಕಿದೆ. ಈಗಾಗಲೇ 65 ಸೋಂಕಿತರಲ್ಲಿ 28ಜನ ಸಂಪೂರ್ಣ ಗುಣಮುಖಗಾರಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ. ವಿದೇಶಗಳಿಂದ ಶಿವಮೊಗ್ಗ ಜಿಲ್ಲೆಗೆ ಬಂದ 47 ಜನರ ಕ್ವಾರಂಟೈನ್‌ನಲ್ಲಿದ್ದು, ಬೇರೆ ರಾಜ್ಯಗಳಿಂದ 342 ಜನ ಕ್ವಾರಂಟೈನ್‌ನಲ್ಲಿ ಇದ್ದಾರೆ.