ಶಿವಮೊಗ್ಗ, ಆ. 26:
ಇತ್ತೀಚಿನ ಕೆಲ ದಿನಗಳಿಂದ ಆಗಿರುವ ಅವಾಂತರಗಳು ಹಾಗೂ ಕಿರಿಕಿರಿಗಳಿಂದ ಬೇಸತ್ತ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಮಂಜುನಾಥಗೌಡ ಅವರು ತಮ್ಮ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡುವ ಮೂಲಕ ಮಾನಸಿಕ ತುಮುಲದಿಂದ ಹೊರಬರಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅವರಿಗೆ ಸಹಕಾರಿ ವಲಯದ ಬಹಳಷ್ಟು ಮೂಲಗಳು ರಾಜೀನಾಮೆ ನೀಡದಂತೆ ಒತ್ತಾಯ ಮಾಡುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದುದು ಹೊಸನಗರ ಹಾಗೂ ತೀರ್ಥಹಳ್ಳಿ ಭಾಗದ ಸಹಕಾರಿ ವಲಯದ ಪ್ರಮುಖರು ನೇರವಾಗಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಯಾವುದೇ ಕಾರಣಕ್ಕೂ ಇಂತಹ ಚಿಕ್ಕಪುಟ್ಟ ಜನಗಳಿಗೆ ಬೇಸರವಾಗಿದೆ ರಾಜೀನಾಮೆ ನೀಡುವುದನ್ನು ಬಿಡಬೇಕು. ನಿಮ್ಮ ಜೊತೆ ನಾವಿದ್ದೇವೆ ಎಂದು ದೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕೆಂದು ಆಗ್ರಹಿಸಿ, ಹೊಸನಗರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರಮುಖರು ಇಂದು ಆರ್.ಎಂ .ಮಂಜುನಾಥಗೌಡಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಖುದ್ದು ಆರ್.ಎಂ.ಮಂಜುನಾಥ ಗೌಡರಿಗೆ ಪ್ರಮುಖರು ಮನವಿ ಪತ್ರ ಅರ್ಪಿಸಿದ್ದಾರೆ.
ಕೊಡುಗೆ: ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದು, ಜಿಲ್ಲೆ ಮಾತ್ರವಲ್ಲದೆ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನವನ್ನು ಆರ್.ಎಂ.ಎಂ. ನಡೆಸಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಅವರ ಪಾತ್ರ ಅತ್ಯಂತ ಮಹತ್ತರವಾದುದಾಗಿದೆ ಎಂದು ಮನವಿಯಲ್ಲಿ ಮುಖಂಡರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಮತ್ತಷ್ಟು ಬಲವರ್ಧನೆಯಾಗಬೇಕಾದರೆ, ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಆರ್.ಎಂ.ಎಂ. ಮುಂದುವರಿಯಬೇಕಾಗಿದೆ. ಈ ಕಾರಣದಿಂದಲೇ 2019 ರಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಅವರ ಆಯ್ಕೆ ಮಾಡಿದ್ದಾರೆನ್ನಲಾಗಿದೆ.
ಆದರೆ ದಿಢೀರ್ ಆಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಸರಿಯಲ್ಲ. ಶಿವಮೊಗ್ಗದ ಸಹಕಾರಿ ಕ್ಷೇತ್ರಕ್ಕೆ ಆರ್.ಎಂ.ಎಂ. ಸೇವೆ ಅಗತ್ಯವಾಗಿದೆ. ಈ ಕಾರಣದಿಂದ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಮನವಿಯಲ್ಲಿ ಮುಖಂಡರು ಆಗ್ರಹಿಸಿದ್ದಾರೆ