ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕತಾವಾಯಿ ಗ್ರಾಮದಲ್ಲಿ ಮಳೆ ಗಾಳಿಗೆ ಮನೆ ಮೇಲೆ ಮರಗಳು ಉರುಳಿದ ಪರಿಣಾಮ ತಾಯಿ ಮಗ ಗಂಭಿರವಾಗಿ ಗಾಯಗೊಂಡಿದ್ದಾರೆ. ಕಾಮಾಕ್ಷಮ್ಮ ತಿಮ್ಮಪ್ಪ (60 ) ದೇವರಾಜ ತಿಮ್ಮಪ್ಪ (31 ) ಗಾಯಗೊಂಡವರು
ಬೆಳಗ್ಗೆ ಮನೆಯಲ್ಲಿ ಉಪಹಾರಸೇವಿಸುತ್ತಿದ್ದ ವೇಳೆ ಗಾಳಿಗೆ ಬೃಹತ್ ಗಾತ್ರದ ಮರಗಳು ಮನೆಯ ಮೇಲ್ಛಾವಣಿಯ ಮೇಲೆ ಬಿದ್ದಿವ ಪರಿಣಾಮ ತಾಯಿಮಗ ಇಬ್ಬರು ಗಾಯಗೊಂಡಿದ್ದು ಮನೆಯಕೊಟ್ಟಿಗೆ ಹಾಗೂ ಸಾಕಷ್ಷು ಹಾನಿಯಾಗಿದ್ದು
ತಾಯಿ ಮಗ ಇಬ್ಬರಿಗೂ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಉಪತಹಶೀಲ್ದಾರ್ ಶಿವಪ್ರಸಾದ್, ಗ್ರಾಪಂ ಪಿಡಿಒ ನಾಗೇಂದ್ರ, ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಸದಸ್ಯ ರೇಣುಕಾ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.