ಶಿವಮೊಗ್ಗ,
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಹತ್ತಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿ ಂದಾಗಿ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ಥ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ಅಗತ್ಯ ನೆರವನ್ನು ನೀಡುವಂತೆ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ರಾಜ್ಯದ ಆಯ್ದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅತಿಹೆಚ್ಚು ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ ಮನೆಯನ್ನು ಕಳೆದುಕೊಂಡವರನ್ನು ಗುರುತಿಸಿ, ತಕ್ಷಣದಲ್ಲಿ ರೂ.೧೦,೦೦೦/-ಗಳ ಸಹಾಯಧನವನ್ನು ನೀಡುವಂತೆ ಸೂಚಿಸಿದ ಅವರು, ಉಳಿದಂತೆ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳ ಗಾಗಿರುವ ಸರ್ಕಾರಿ ಸ್ವಾಮ್ಯದ ಶಾಲೆ, ಅಂಗನವಾಡಿ ಹಾಗೂ ಮತ್ತಿತರ ಇಲಾಖಾ ಕಟ್ಟಡಗಳು, ರಸ್ತೆ, ಸೇತುವೆ, ಜಲಾಶಯಗಳ ತುರ್ತು ದುರಸ್ತಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ಕ್ರಮ ವಹಿಸು ವುದು. ಅಂತೆಯೇ ಆಗಿರಬಹುದಾದ ಬೆಳೆಹಾ ನಿಯ ಸಮೀಕ್ಷೆ ನಡೆಸಿ, ಖಚಿತವಾದ ವರದಿಯನ್ನು ಸಂಗ್ರಹಿಸಿ ಕಾಲಕಾಲಕ್ಕೆ ಸಲ್ಲಿಸುವಂತೆ, ಅಗತ್ಯ ವಿರುವಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳನ್ನು ಸಂಪರ್ಕಿಸುವಂತೆ ಹಾಗೂ ಶಾಶ್ವತ ಪರಿಹಾರ ಕಾರ್ಯ ಕೈಗೊಳ್ಳಲು ಕ್ರಿಯಾ ಯೋಜನೆ ಯನ್ನು ತಯಾರಿಸಿ ಸಲ್ಲಿಸುವಂತೆಯೂ ಅವರು ಸೂಚಿಸಿದರು.
ಸಂವಾದದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಮುಖ್ಯಮಂತ್ರಿಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಸಮಗ್ರ ಮಾಹಿತಿ ನೀಡಿ, ಜುಲೈ ಮಾಹೆಯಲ್ಲಿ ನಿಗಧಿಪಡಿಸಿದ ಕಾಲಾವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿರುವ ಮಳೆಯಿಂದಾಗಿ ಆಸ್ತಿ ಹಾಗೂ ಬೆಳೆಹಾನಿ ಉಂಟಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಳೆ ಮುಂದುವರೆದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ತುರ್ತು ಕ್ರಮಗಳಿಗಾಗಿ ಅಗತ್ಯ ಸಿಬ್ಬಂಧಿಗಳನ್ನು ಮೇಲುಸ್ತುವಾರಿಗಾಗಿ ನಿಯೋಜಿಸಲಾಗಿದೆ ಎಂದರು.
ಪ್ರಸಕ್ತ ಮುಂಗಾರಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ರಸಗೊಬ್ಬರ ದಾಸ್ತಾನಿದ್ದು, ಎಲ್ಲಾ ರೈತರಿಗೂ ಸಕಾಲದಲ್ಲಿ ವಿತರಣೆಯಾಗುವಂತೆ ಕ್ರಮವಹಿಸಲಾಗಿದೆ. ಅಲ್ಲದೇ ಇನ್ನಷ್ಟು ರಸಗೊ ಬ್ಬರ ಜಿಲ್ಲೆಗೆ ಬರಲಿದ್ದು, ಒಂದೆರೆಡು ದಿನಗಳಲ್ಲಿ ರೈತರ ಅಗತ್ಯಗಳಿಗೆ ಸಕಾಲದಲ್ಲಿ ಪೂರೈಕೆಯಾ ಗಲಿದೆ. ಅಲ್ಲದೇ ಕೃಷಿಕರ ಅಹವಾಲುಗಳನ್ನು ಆಲಿಸಲು ಕೃಷಿ ಸಹಾಯವಾಣಿಯನ್ನು ಆರಂಭಿ ಸಲು ಜಂಟಿಕೃಷಿ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಗತ್ಯವಿರುವ ತಾಲೂಕು ಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗಾಗಿ ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ, ಜಿಲ್ಲಾ ಯೋಜನಾ ಧಿಕಾರಿ ಮೂಕಪ್ಪ ಕರಭೀಮಣ್ಣನವರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್, ಜಂಟಿ ಕೃಷಿ ನಿದೇಶಕಿ ಪೂರ್ಣಿಮಾ ಜಿ.ಸಿ., ಡಾ|| ಶಿವಯೋಗಿ ಮತ್ತಿತರರಿದ್ದರು.