ನಾನು ಈಗ ಆರ್ಯವೈಶ್ಯ ಸಮುದಾಯದ ನಿಗಮ ಮಂಡಳಿ ಅಧ್ಯಕ್ಷನಾಗಿಲ್ಲ. ಸಮುದಾಯದ ಜನರೂ ಸೇರಿದಂತೆ ಹಲವರು ನಾನು ಈಗಲೂ ನಿಗಮದ ಅಧ್ಯಕ್ಷನಾಗಿದ್ದೇನೆ ಎಂದು ತಿಳಿದುಕೊಂ ಡಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ಕೇಳುತ್ತಿದ್ದಾರೆ. ಆದರೆ, ಈಗ ಮುಂದುವರೆದಿಲ್ಲ. ನವೆಂಬರ್ ೧೭ ರಂದೇ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ನೀಡಿಯೇ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದೆ.
-ಡಿ.ಎಸ್. ಅರುಣ್

ಶಿವಮೊಗ್ಗ,
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆ ಅಡಿಯಲ್ಲಿ ಹಲವು ಮಾರ್ಪಾ ಡುಗಳನ್ನು ಮಾಡುವ ಮೂಲಕ ಫಲಾನುಭವಿ ಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸೇರಿ ಸರ್ಕಾರದ ಗಮನಸೆಳೆದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಆವಾಸ್ ವಸತಿ ಯೋಜನೆ ಸೇರಿದಂತೆ ಹಲವು ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈಗಿರುವ ನಿಯಮಗಳು ಬಿಗಿಯಾಗಿದ್ದು, ಹಲವು ತಾಂತ್ರಿಕ ಕಾರಣಗಳಿಂದ ಪರಿಹಾರಧನ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸಹಾಯಧನ ಹೆಚ್ಚಿಸುವುದರ ಜೊತೆಗೆ ಸರಿಯಾದ ಸಮಯಕ್ಕೆ ತಲುಪುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಅವರು ಒಪ್ಪಿದ್ದಾರೆ. ವಿಧಾನ ಪರಿಷತ್ ನ ಸದಸ್ಯರೆಲ್ಲರೂ ಪಕ್ಷಾತೀ ತವಾಗಿ ಈ ಮನವಿ ಮಾಡಿದ್ದೇವೆ ಎಂದರು.


ಫಲಾನುಭವಿಗಳಲ್ಲಿ ಅನೇಕರಿಗೆ ಮೊದಲ ಕಂತು ಬಿಡುಗಡೆಯಾಗಿದೆ. ಎರಡನೇ ಕಂತು ಬಿಡುಗಡೆಯಾಗಿಲ್ಲ. ಇದಕ್ಕೆ ಹಲವು ತಾಂತ್ರಿಕ ಕಾರಣಗಳಿವೆ. ದಾಖಲೆಗಳನ್ನು ಅಪ್ ಲೋಡ್ ಮಾಡಲು ಸಮಸ್ಯೆಯಾಗುತ್ತಿದೆ. ಪಿಡಿಒ ಜವಾಬ್ದಾರಿ ಹೆಚ್ಚಿರುತ್ತದೆ. ಈ ಪಿಡಿಒಗಳು ಫಲಾನುಭವಿಗಳಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಲೆದಾಡಿ ಸುತ್ತಾರೆ

ಈ ಬಗ್ಗೆಯೂ ಸರ್ಕಾರದ ಗಮನಸೆಳೆದಿದ್ದೇವೆ ಎಂದರು.
ಟ್ರೇಡ್ ಲೈಸೆನ್ಸ್ ವಿಧಾನ ಪರಿಷತ್ ನಲ್ಲಿ ಚರ್ಚಿಸುತ್ತೇನೆ. ರಾಗಿ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯಿಸುತ್ತೇನೆ. ದೊಡ್ಡ ನಗರಗಳಲ್ಲಿ ಯೆಲ್ಲೋ ಬೋರ್ಡ್ ಇರುವ ವಾಹನಗಳಿಗೆ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದು, ಇದಕ್ಕೆ ತಿದ್ದುಪಡಿ ತರಲು ಯೋಚಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಇತರೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ಅದನ್ನು ಕೂಡ ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.


ಅಕ್ಕಿ ಸೇರಿದಂತೆ ಆಹಾರಧಾನ್ಯಗಳ ಮೇಲೆ ಜಿ.ಎಸ್.ಟಿ. ವಿಧಿಸಿರುವ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅನಿವಾರ್ಯ ಕಾರಣಗಳಿಂದ ಜಿ.ಎಸ್.ಟಿ. ವಿಧಿಸಬೇಕಾಗುತ್ತದೆ. ಈ ಹಣ ಕೂಡ ದೇಶದ ಅಭಿವೃದ್ಧಿಗೆ ಖರ್ಚಾಗುತ್ತದೆ. ಇನ್ನು ಆರು ತಿಂಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾ ಎನ್.ಕೆ. ಜಗದೀಶ್, ಬಿ.ಆರ್. ಮಧುಸೂದನ್, ಹೃಷಿಕೇಶ್ ಪೈ, ಗಂಗಾಧರ್, ಸತೀಶ್, ದಿನೇಶ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!