ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನ ಕುಟುಂಬದ ಶಾಪ ಕೆ.ಎಸ್. ಈಶ್ವರಪ್ಪ ಅವರನ್ನು ತಟ್ಟದೇ ಬಿಡುವುದಿಲ್ಲ. ಅದು ಈಶ್ವರಪ್ಪ ಕುಟುಂಬದವರನ್ನು ಕಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.


ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಖುಲಾಸೆಯಾಗಿರುವುದು ಹಾಸ್ಯಾಸ್ಪದವಾಗಿದೆ.

ಪೊಲೀಸರು ಒಮ್ಮೆಯೂ ಈಶ್ವರಪ್ಪ ಅವರನ್ನು ಕರೆಸಲಿಲ್ಲ. ತನಿಖೆಯನ್ನೂ ಮಾಡದೇ ಬಿ ರಿಪೋರ್ಟ್ ಹಾಕಿದ್ದಾರೆ. ಮುಖ್ಯಮಂತ್ರಿ ಪದೇ ಪದೇ ಹೇಳುತ್ತಿದ್ದರು. ಈಶ್ವರಪ್ಪನವರು ಈ ಕೇಸ್ ನಿಂದ ಪಾರಾಗುತ್ತಾರೆ ಎಂದು. ಅವರ ಆಶೀರ್ವಾದದಂತೆ ಈಶ್ವರಪ್ಪನವರು ಬಚಾವಾಗಿದ್ದಾರೆ ನಿಜ. ಆದರೆ, ಅವರ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈಶ್ವರಪ್ಪನವರಿಗೆ ಈ ಕಂಟಕ ತಪ್ಪಿದ್ದಲ್ಲ. ಅವರು ಹೈಕೋರ್ಟ್ ಮೊರೆ ಹೋಗುತ್ತಾರೆ ಎಂದರು.


ಶಿವಮೊಗ್ಗ ಜಿಲ್ಲೆ ಈಗ ಕೊಲೆಗಡುಕರ ಜಿಲ್ಲೆಯಾಗಿದೆ. ಹಾಡಹಗಲೇ ಪೊಲೀಸ್ ಠಾಣೆಗಳ ಮುಂದೆಯೇ ಕೊಲೆಯಾಗುತ್ತದೆ. ಇದಕ್ಕೆ ಶಾಸಕ ಈಶ್ವರಪ್ಪನವರೇ ನೇರ ಕಾರಣವಾಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸೋತಿದ್ದಾರೆ ಎಂದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರ ರಮೇಶ್ ಶಂಕರಘಟ್ಟ, ಪಿ.ಒ. ಶಿವಕುಮಾರ್, ಸೋಮಶೇಖರ್, ವಿಜಯಲಕ್ಷ್ಮಿ ಪಾಟೀಲ್ ಮುಂತಾದವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!