ನವದೆಹಲಿ, ಜುಲೈ 27:
ಕಸ್ತೂರಿ ರಂಗನ್ ವರದಿಯ ಬಗ್ಗೆ ಪುನರ್ ಪರೀಶಿಸಲು ತಜ್ಞರ ಸಮಿತಿ ನೇಮಿಸಲು, ಕೇಂದ್ರ ಸಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಈ ಕುರಿತು, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು, ನವ ದೆಹಲಿಯಲ್ಲಿ, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಿಯೋಗಕ್ಕೆ, ಕೇಂದ್ರ ಪರಿಸರ ಸಚಿವ ಬೂಪೇಂದ್ರ ಯಾದವ್ ಅವರು ಈ ಆಶ್ವಾಸನೆ ನೀಡಿದ್ದಾರೆ ಎಂದಿದ್ದಾರೆ.
ನಿಯೋಗದ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು, ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿದ್ದ ಅಧಿಸೂಚನೆ ಯಿಂದಾಗುವ ಜನಜೀವನದ ಮೇಲಾಗುವ ಆರ್ಥಿಕ ಪ್ರತಿಕೂಲಗಳ ಬಗ್ಗೆ ಗಮನ ಸೆಳೆದಿದ್ದಾರೆ ಎಂದರು.
ನಿಯೋಗದ ಸದಸ್ಯರ ಮನವಿ ಮೇರೆಗೆ, ಅಧಿಸೂಚನೆಗೆ, ತಡೆ ಹಿಡಿದಿದ್ದು, ತಜ್ಞರ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದಾರೆ.
ಕೇಂದ್ರದ ಮಾಜಿ ಪರಿಸರ ಸಚಿವಾಲಯದ ಮಾಜಿ ಕಾರ್ಯದರ್ಶಿ ಸಂಜೀವ್ ಕುಮಾರ್ ನೇತೃತ್ವದ ತಜ್ಞರ ತಂಡ, ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ವಲಯದಲ್ಲಿ, ಸರ್ವೇ ಕಾರ್ಯ, ಹಾಗೂ ಜನಸಂಪರ್ಕ ಹಾಗೂ ಸಂವಾದ ನಡೆಸುವುದು, ಎಂದೂ ಸಚಿವರು ತಿಳಿಸಿದ್ದಾರೆ.
ನಿಯೋಗದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಅವರು ಸೇರಿದಂತೆ, ಹಿರಿಯ ನಾಯಕರು ಪಾಲ್ಗೊಂಡಿದ್ದರು ಎಂದು ಹೇಳಿದ್ದಾರೆ.