ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ,
ನಗರದ ದುರ್ಗಿಗುಡಿ ಕೋಆಪರೇಟಿವ್ ಸೊಸೈಟಿಯಿಂದ ಎಸ್ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ80ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಎ ದರ್ಜೆ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಸಂಘದ ಸದಸ್ಯರ ಮಕ್ಕಳು ಆಗಸ್ಟ್ ೧೫ ರೊಳಗೆ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಸಂಘದ ಮುಖ್ಯ

ಕಾರ್ಯನಿರ್ವಹಣಾಧಿಕಾರಿ ಭರತ್ ಕುಮಾರ್ ತಿಳಿಸಿದ್ದಾರೆ.