ಶಿವಮೊಗ್ಗ,
ಪದ್ಮಭೂಷಣ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ನಾಥ ಮಹಾಸ್ವಾಮೀಜಿಯ ವರ ಕೃಪಾಶೀರ್ವಾದಗಳೊಂ ದಿಗೆ, ಪ್ರತಿವರ್ಷದಂತೆ ಈ ವರ್ಷವೂ ಸಹ ಶಿವಮೊಗ್ಗ ನಗರದ ಕ್ರೀಡಾ ಪ್ರೇಮಿಗಳಿಗಾಗಿ ಹಾಗೂ ೭೫ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಆದಿಚುಂಚ ನಗಿರಿ ಶಿಕ್ಷಣ ಟ್ರಸ್ಟ್( ರಿ )ಶಿವಮೊಗ್ಗ ಹಾಗೂ ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಚುಂಚಾದ್ರಿ ಕಪ್

೨೦೨೨ರ ವಾಲಿಬಾಲ್ ಸ್ಪರ್ಧೆಯನ್ನು ಆಗಸ್ಟ್ ೧೨ರಿಂದ ೧೪ರವರೆಗೆ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು,

ಈ ಕ್ರೀಡಾ ಕೂಟದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಮಹಾ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಿಸುವರು.

ತಮ್ಮ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರ ತಂಡಗಳನ್ನು ಈ ಸ್ಪರ್ಧೆಗೆ ಕಳುಹಿಸಿ, ಚುಂಚಾದ್ರಿ ಕಪ್ ೨೦೨೨ ನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕೋರು ತ್ತೇವೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಕಡ್ಡಾಯವಾಗಿ ತಮ್ಮ ಶಾಲೆಯ ಕ್ರೀಡಾಪಟುಗಳ ಜೊತೆಯಲ್ಲಿ ಇರತಕ್ಕದ್ದು, ಒಂದು ವೇಳೆ ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳ ಜೊತೆ ಇಲ್ಲದ ತಂಡಗಳಿಗೆ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅವಕಾಶವಿರುವು ದಿಲ್ಲ.

ಜೊತೆಗೆ ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರವನ್ನು ತರಬೇತಿದಾರರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ತರತಕ್ಕದ್ದು.
ತಮ್ಮ ತಂಡಗಳ ನೋಂದಣಿಗಾಗಿ ನಾವು ಕಳುಹಿಸಿರುವ ನೋಂದಣಿ ಪತ್ರದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡಿ ಪ್ರಾಂಶುಪಾಲರು,ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶರಾವತಿ ನಗರ, ಶಿವಮೊಗ್ಗ ಇವರಿಗೆ ಆ.೦೩ರೊಳಗಾಗಿ ಕಳುಹಿಸಿಕೊಡಲು ಕೋರಲಾಗಿದೆ.

ವಿ. ಸೂ : ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮಸ್ತ ಧರಿಸಿ ಈ ಪಂದ್ಯಾ ವಳಿಯಲ್ಲಿ ಭಾಗವಹಿಸಬೇಕು.೧೭ ವರ್ಷ ವಯೋಮಿತಿ ಮೀರಿರಬಾರದು (೦೧-೦೧-೨೦೦೬ರ ನಂತರ ಜನಿಸಿರಬೇಕು ) ಕಡ್ಡಾಯವಾಗಿ ೧೮ ಕಾಲಂ ಇರುವ ಗುರುತಿನ ಚೀಟಿ ತರಬೇಕು (ಇತ್ತೀಚಿನ ಭಾವಚಿತ್ರದೊಂ ದಿಗೆ ), ವಿದ್ಯಾರ್ಥಿಗಳ ಆಧಾರ ಗುರುತಿನ ಕಾರ್ಡ್, SಂಖಿS ನಂಬರ್ ಹಾಗೂ ಶಾಲೆಯ ಡೈಸ್ ಕೋಡ್ ಕಡ್ಡಾಯವಾಗಿರುತ್ತದೆ. 9945833464, 89714525 32, 8880895404 ,9964796101 ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಸಂಸ್ಥೆಯ ಪ್ರಾಂಶುಪಾಲ ರಾದ ಎಸ್.ಆರ್. ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.