ಶಿವಮೊಗ್ಗ,
ಮತಾಂಧ ಶಕ್ತಿಗಳನ್ನು ಬೆಳೆಸಿದ್ದೇ ಕಾಂಗ್ರೆಸ್. ಆ ಶಕ್ತಿಗಳನ್ನು ಮಟ್ಟ ಹಾಕುವುದೇ ನಮ್ಮ ಸರ್ಕಾರಕ್ಕಿರುವ ದೊಡ್ಡ ಸವಾಲು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಮೇಲೆ ದಾಳಿಯಾಗುತ್ತಿದೆ. ಹರ್ಷನ ನಂತರ ಪ್ರವೀಣ್ ಕೊಲೆಯಾಗಿದೆ. ಈ ಅಸಮಾಧಾನ ನಮಗೂ ಇದೆ. ನೋವಿದೆ. ನಿಜಕ್ಕೂ ನನಗೆ ಎರಡು ದಿನ ಊಟವೇ ಸೇರಲಿಲ್ಲ.

ಈ ಕೊಲೆಗಾರರನ್ನು ಶೀಘ್ರವೇ ಬಂಧಿಸುತ್ತೇವೆ. ಅಗತ್ಯಕ್ರಮ ಕೈಗೊಳ್ಳುತ್ತೇವೆ. ಒಂದು ವ್ಯವಸ್ಥೆಯ ಮುಖ್ಯಸ್ಥನಾಗಿರುವ ನನಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.


ಸರ್ಕಾರದ ಮತ್ತು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ನಮ್ಮವರೇ. ಅವರದು ಸಾತ್ವಿಕ ಪ್ರತಿಭಟನೆಯಾಗಿದೆ. ಇಂತಹ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥ ಮಾಡಿಕೊಳ್ಳಬೇಕು ಎಂದರು.

By admin

ನಿಮ್ಮದೊಂದು ಉತ್ತರ

You missed

error: Content is protected !!