
ಬೆಂಗಳೂರು,
ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.

ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಇರುವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಯಡಿಯೂರಪ್ಪ ರಾಜ್ಯದ ಪ್ರಸ್ತುತ ರಾಜಕಾರಣದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ತಮ್ಮ ಪುತ್ರ ವಿಜಯೇಂದ್ರಗೆ ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ಟಿಕೆಟ್ ನೀಡುವುದು, ಚುನಾವಣಾ ರಾಜಕಾರಣದಿಂದ

ತಮ್ಮ ನಿವೃತ್ತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಭೇಟಿ ಸಂದರ್ಭದಲ್ಲಿ ಪ್ರಾಸಂಗಿಕವಾಗಿ ಪ್ರಸ್ತಾಪವಾಗಿದೆ. ಯಾವುದೇ ರೀತಿಯಿಂದಲೂ ವಿಚಲಿತರಾಗಬೇಡಿ ಎಂದು ಶಾ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.