![Untitled-5 copy](https://tungataranga.com/wp-content/uploads/2022/08/Untitled-5-copy-1.jpg)
ಸಾಗರ,
ಶರಾವತಿ ವನ್ಯಜೀವಿ ಅಭಯಾರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯವನ್ನು ಖಂಡಿಸಿ ಜನಪರ ಹೋರಾಟ ವೇದಿಕೆ ಮತ್ತು ಕಾಗೋಡು ಜನಪರ ವೇದಿಕೆಯಿಂದ ಶುಕ್ರವಾರ 220 ಕಿ.ಮೀ. ಪಾದಯಾತ್ರೆ ನಡೆಯಿತು.
![](http://tungataranga.com/wp-content/uploads/2022/08/06-08-2022-683x1024.jpg)
ಬಿಳಿಗಾರು ಗ್ರಾಮದಿಂದ ಕಾರ್ಗಲ್ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡಿದರು.
![](http://tungataranga.com/wp-content/uploads/2022/08/06-08-2022-1-683x1024.jpg)
ಭಾರಂಗಿ ಹೋಬಳಿಯ ಸಾವಿರಾರು ಮಂದಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು.
![](http://tungataranga.com/wp-content/uploads/2022/08/Screenshot_2022_0803_144323-1.jpg)
ಡಿಸಿಸಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಸಾಮಾಜಿಕ ಹೋರಾಟಗಾರ ಜಿ.ಟಿ. ಸತ್ಯನಾರಾಯಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಪ್ರಭಾವತಿ, ಅಶೋಕ ಬರದವಳ್ಳಿ ಹಲವರಿದ್ದರು.