ಶಿವಮೊಗ್ಗ, ಆ.11:
ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್ ವೈಶಾಲಿ ಅವರಿಗೆ ಪದೋನ್ನತಿಯೊಂದಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ ಅವರನ್ನು ಜಿಲ್ಲಾಧಿಕಾರಿಯಾಗಿ ಪದೋನ್ನತಿ ನೀಡಿ ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.


ಐಎಎಸ್ ಅಧಿಕಾರಿಯಾಗಿರುವ ವೈಶಾಲಿ ಅವರು ಸದ್ಯ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸಮರ್ಥವಾಗಿ ಕಾರ್ಯ ನಿರ್ವಹಿಸುವ ಮೂಲಕ ಹೆಸರುವಾಸಿಯಾಗಿದ್ದಾರೆ. ಇವರಿಗೆ ಪದೋನ್ನತಿ ನೀಡಿ ಗದಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಜಿ.ಪಂ. ಸಿಇಓ ಸ್ಥಾನಕ್ಕೆ ರಾಜ್ಯ ಪಂಚಾಯತ್ ಸಂಪನ್ಮೂಲ ಕೇಂದ್ರದ ನಿರ್ದೇಶಕ ಪ್ರಕಾಶ್ ಅವರನ್ನು ವರ್ಗಾವಣೆ ಮಾಡಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!