ಹೊಳೆಹೊನ್ನೂರು,
ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಗ್ರಾಮದ ಪ್ರಕಾಶ್ ಎಂಬಾ ತನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯು ೧೩ ವರ್ಷ ಪ್ರಾಯದಲ್ಲೇ ಅದೇ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು.
ಮನೆಯಲ್ಲಿ ಗೊತ್ತಾದರೆ ಸಮಸ್ಯೆಯಾದೀತು ಎಂದು ಬಾಲಕಿಯು ಒಂದೂವರೆ ತಿಂಗಳ ಹಿಂದೆ ಯುವಕ ನೊಂದಿಗೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಮನೆಯವರು ಪೊಲೀಸ್ ಠಾಣೆಯಲ್ಲಿ
ನಾಪತ್ತೆ ಪ್ರಕರಣ ದಾಖಲಿಸಿದ್ದರು ಹಾಗೂ ಈ ಯುವಕನೇ ಕರೆದೊಯ್ದಿ ರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.
ಮನೆ ತೊರೆದಿದ್ದ ಜೋಡಿ ದೇವಸ್ಥಾನವೊಂರಲ್ಲಿ ಮದುವೆಯಾಗಿ, ಈಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಾಲಕಿಯನ್ನು ಬಾಲಮಂದಿರದಲ್ಲಿ ಇರಿಸಲಾಗಿದೆ.