ಶಿವಮೊಗ್ಗ,
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೆಪ್ಟಂಬರ್ ೦೨ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಈ ಸಂಬಂಧ ಜಿಲ್ಲಾಧಿಕಾರಿ ಡಾ||ಆರ್. ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳಿ ಗಾಗಿ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳು ತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ

ಅವರು, ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆಗಸ್ಟ್ ೨೫ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಇದೇ ಸಂದರ್ಭದಲ್ಲಿ ವಿವಿಧ ಇಲಾಖೆ ಗಳು ಹಾಗೂ ನಿಗಮ-ಮಂಡಳಿಗಳಿಂದ ನೀಡಲಾಗುವ ಸೌಲತ್ತುಗಳಿಗೆ ಆಯ್ಕೆಯಾಗಿ ರುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತ ರಿಸಲು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪು ಗಳಿಗೆ ನೀಡಲಾಗುವ ಸೌಲಭ್ಯಗಳನ್ನು ವಿತರಿ ಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ

, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಮಾರ್ಟ್‌ಸಿಟಿ ಕಾಮಗಾರಿಗಳು, ಸಣ್ಣ ಮತ್ತು ಭಾರೀ ನೀರಾ ವರಿ ಇಲಾಖೆ ಸೇರಿದಂತೆ ಪ್ರಮುಖ ಇಲಾ ಖೆಗಳ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿವೆ. ಅದಕ್ಕಾಗಿ ಆಹ್ವಾನ ಪತ್ರಿಕೆಯೊಂದಿಗೆ ಇಲಾಖಾ ಕಾರ್ಯಕ್ರಮಗಳ ಎಲ್ಲಾ ವಿವರಗಳನ್ನು ಹೊಂದಿರುವ ಕಿರು ಹೊತ್ತಿಗೆ ಪ್ರಕಟಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾ ಯದ ಮುಖಂಡರು, ಗಣ್ಯರು, ಹಿರಿಯರನ್ನು ಆಹ್ವಾನಿಸಲಾಗುವುದು ಎಂದ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳು ಆಗಸ್ಟ್ ೨೫ರೊಳಗಾಗಿ ಮಾಹಿತಿಯನ್ನು ಒದಗಿಸಲು ಸೂಚಿಸಿರುವುದಾಗಿ ಅವರು ನುಡಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ||ನಾಗೇಂದ್ರ ಎಫ್.ಹೊನ್ನಳ್ಳಿ, ಮೇಯರ್ ಶ್ರೀಮತಿ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್, ಮೂಕಪ್ಪ ಕರಭೀಮಣ್ಣನವರ್, ಚಿದಾನಂದ ಎಸ್.ವಟಾರೆ, ಮಾಯಣ್ಣಗೌಡ, ದೊಡ್ಡಗೌಡರ್, ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!