ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ವಾಸಿಯೊಬ್ಬರ ಮನೆಯ ಬಾಗಿಲಿಗೆ ಬೀಗವನ್ನು ಹಾಕಿ, ಬೀಗದ ಕೀ ಅನ್ನು ತುಳಸಿ ಕಟ್ಟೆಯ ಹತ್ತಿರ ನೋಡಿದ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು, ನಗದು ಹಣ ಮತ್ತು ಮೊಬೈಲ್ ಫೋನ್ ಅನ್ನು ಕಳ್ಳತನ ಮಾಡಿದ್ದಾರೆ.
ಸದರಿ ಪ್ರಕರಣದಲ್ಲಿ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0004/2021 ಕಲಂ 454, 380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಸಿಪಿಐ ಭದ್ರಾವತಿ ನಗರ ವೃತ್ತ ಮತ್ತು ಪಿಎಸ್ಐ ಹೊಸಮನೆ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವು ಸದರಿ ಪ್ರಕರಣದ ತನಿಖೆ ಕೈಗೊಂಡು ದಿನಾಂಕಃ- 18-08-2022 ರಂದು ಆರೋಪಿ ವಸಂತರಾಜು, 37 ವರ್ಷ, 3ನೇ ತಿರುವು ಹೊಸಮನೆ, ಭದ್ರಾವತಿ ಟೌನ್ ಈತನನ್ನು ದಸ್ತಗಿರಿ ಮಾಡಿ ಈತನಿಂದ ಹೊಸಮನೆ ಪೊಲೀಸ್ ಠಾಣೆಯ 01 ಪ್ರಕರಣ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 02 ಮನೆಗಳ್ಳತನ ಪ್ರರಕಣಗಳಲ್ಲಿ ಕಳ್ಳತನ ಮಾಡಲಾದ ಅಂದಾಜು ಮೌಲ್ಯ 5,89,500/- ರೂಗಳ 131 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.