ಶಿವಮೊಗ್ಗ,
ಮಕ್ಕಳ ಭಿಕ್ಷಾಟನೆಯನ್ನು ತಪ್ಪಿಸದಿದ್ದಲ್ಲಿ ಇದೊಂದು ಗಂಭೀರ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಳವಳ ವ್ಯಕ್ತಪಡಿಸಿದರು.


ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗ ಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾ ಶ್ರಯದಲ್ಲಿ ನಗರದ ಡಿ.ಎ.ಆರ್ ಸಭಾಂಗಣ ದಲ್ಲಿ ಇಂದು ಏರ್ಪಡಿಸಲಾಗಿದ್ದ ‘ಮಕ್ಕಳ ಭಿಕ್ಷಾಟಣೆ ತಡೆ ಉಸ್ತುವಾರಿ ತಂಡದ ಸದಸ್ಯರುಗಳಿಗೆ ಹಾಗೂ ಜಿಲ್ಲೆಯ ಎಲ್ಲಾ ಠಾಣೆಯ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳಿಗೆ ಬಾಲ ಭಿಕ್ಷಾಟನೆ ತಡೆ ಮತ್ತು ಪುನರ್ವಸತಿ ಕುರಿತಾದ ತರಬೇತಿ ಕಾರ್ಯಾ ಗಾರ ಉದ್ಘಾಟಿಸಿ ಮಾತನಾಡಿದರು.


ದುರ್ಬಲ ಮಕ್ಕಳು ಅಥವಾ ಕಳ್ಳ ಸಾಗಾ ಣಿಕೆ ಮಾಡಿ ತಂದ ಮಕ್ಕಳನ್ನು ಭಿಕ್ಷಾಟನೆಗೆ ಹಚ್ಚಿರುವ ಸಂದರ್ಭ ಹೆಚ್ಚಾಗಿದ್ದು, ನೀವು ಅನುಕಂಪದಿಂದ ನೀಡುವ ಭಿಕ್ಷೆ ಮಗು ಪಾಲಾಗುವುದಿಲ್ಲ. ಬದಲಾಗಿ ಮಕ್ಕಳು ಜೀವನಪೂರ್ತಿ ಭಿಕ್ಷುಕರಾಗಿ ಉಳಿಯುವ ಸಂಭವವೇ ಹೆಚ್ಚಾಗಿರುತ್ತದೆ. ಆದ್ದರಿಂದ ಮಕ್ಕಳ ಭಿಕ್ಷಾಟಣೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಾಲುದಾರ ಇಲಾಖೆಗಳಾದ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ಕಲ್ಯಾಣ ಸಮಿತಿ ಸೇರಿದಂತೆ ವಿವಿಧ ಇಲಾಖೆ ಗಳ ಅಧಿಕಾರಿಗಳಿಗೆ ಈ ಕಾರ್ಯಾಗಾರ ಏರ್ಪಡಿಸಿರುವುದು ಅತ್ಯಂತ ಸೂಕ್ತವಾಗಿದೆ.


ಮಕ್ಕಳ ಭಿಕ್ಷಾಟನೆ ಎಂಬುದು ಒಂದು ಗಂಭೀರ ವಿಷಯ. ಮಕ್ಕಳ ಭಿಕ್ಷಾಟನೆ ತಡೆ ಉಸ್ತುವಾರಿ ತಂಡದ ಸದಸ್ಯರು ಇಂದಿನ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಟ್ಟುನಿಟ್ಟಾಗಿ ಈ ಪಿಡುಗನ್ನು ತಡೆಯುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.


ನಗರದಲ್ಲಿ ಸಹ ಮಕ್ಕಳ ಭಿಕ್ಷಾಟಣೆ, ಮಕ್ಕಳ ಕಳ್ಳ ಸಾಕಾಣಿಕೆಯನ್ನು ಕಾಣುತ್ತಿದ್ದೇವೆ. ಮಕ್ಕಳು ಸಾಮಾಜಘಾತುಕರಾಗುವ ಮುನ್ನ ಎಚ್ಚೆತ್ತುಕೊಂಡು ಸಾಂವಿಧಾನಿಕವಾದ ಎಲ್ಲ ರೀತಿಯ ರಕ್ಷಣೆ, ಹಕ್ಕುಗಳು ಮತ್ತು ಸೌಲಭ್ಯ ನೀಡುವ ಮೂಲಕ ಜವಾಬ್ದ್ದಾರಿ ಪ್ರಜೆಯಾಗಿ ಸುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾ ರಿಗಳಿಗೆ ಕಿವಿಮಾತು ಹೇಳಿದ ಅವರು ಭಿಕ್ಷೆ ಬೇಡುವ ಮಕ್ಕಳನ್ನು ಕಂಡಾಗ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆ ಮಾಡುವ ಮೂಲಕ ಸಣ್ಣ ಸಹಾಯ ಮಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ.ಬಿ.ಎಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್.ಕೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!