ಹಾಕಿ ಪಟು ಧ್ಯಾನ್‍ಚಂದ್ ಅವರ ಜನ್ಮ ದಿನದವನ್ನು 2012 ರಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣ3ಯನ್ನಾಗಿ ಆಚರಿಸಲಾಗುತ್ತಿದೆ. ಹಾಕಿ ಮಾಂತ್ರಿಕ ಧ್ಯಾನ್‍ಚಂದ್ ಅವರಂತೆ ಎಲ್ಲ ಕ್ರೀಡಾಪಟುಗಳು ಸಾಧನೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿಯವರು ಹಾಕಿ ಮಾಂತ್ರಿಕ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.


ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಇಂದು ಆರಂಭವಾದ ಶಿವಮೊಗ್ಗ ತಾಲ್ಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಭಾನುವಾರ ಮುಕ್ತಾಯಗೊಂಡ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದು ರಾಜ್ಯ ದಾಖಲೆ ನಿರ್ಮಿಸಿದ ಕ್ರೀಡಾಪಟುಗಳಾದ

ಆಕಾಶ್.ಎಸ್ ಗೊಲ್ಲರ್ 800 ಮೀಟರ್ ಓಟವನ್ನು 1 ನಿಮಿಷ 52 ಸೆಕೆಂಡ್ ಮತ್ತು ಗೌತಮಿ ಎತ್ತರ ಜಿಗಿತದಲ್ಲಿ 1.65 ಮೀ ಜಿಗಿದು ಸಾಧನೆಗೈದ ಈರ್ವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸ್ವಾಮಿ, ಕ್ರೀಡಾಪಟುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!