ಚಿತ್ರದುರ್ಗ,ಸೆ.02 :
ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧದ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮುರುಘ ಶ್ರೀ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಅವರನ್ನು ಚಿತ್ರದುರ್ಗದ ಜಿಲ್ಲಾ ಕಾರಾಗೃಹಕ್ಕೆ ಸೇರಿಸಲಾಗಿದೆ.
ಶ್ರೀಗಳನ್ನು ನಿನ್ನೆ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.ವಿಚಾರಣೆಈ ನಡುವೆ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ ಒಂದನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ-ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು.
ಸದ್ಯ ಅವರನ್ನು ನ್ಯಾಯಾಧೀಶರ ಮುಂದೆ ಕೂಡ ಹಾಜರು ಪಡಿಸಿ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದೆ.
ಈ ನಡುವೆ ಶ್ರೀಗಳ ವಿರುದ್ದ ಅಟ್ರಾಸಿಟಿ, ಸುಮಟೋ ಕೇಸ್ ಕೂಡ ದಾಖಲಾಗಿದೆ. ಹೀಗಾಗಿ ಅವರನ್ನು ಬಂಧಿಸಬೇಕು ಅಂತ ಹಲವು ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದ್ದವು, ಇದಲ್ಲದೇ ಚಿತ್ರದುರ್ಗ ಪೋಲಿಸರ ಕಾರ್ಯವೈಖರಿ ವಿರುದ್ದ ಕೂಡ ಅಕ್ರೋಶ ಕೇಳಿ ಬಂದಿತ್ತು.
ಪ್ರಕರಣದ ವಿವರ: ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಠಾಧೀಶರಾದ ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಕರ್ನಾಟಕ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ನೀಡಲಾಗಿತ್ತು .
ಶಿವಮೂರ್ತಿ ಮುರುಘಾ ಶರಣರು ಕರ್ನಾಟಕದ ಚಿತ್ರದುರ್ಗದ ಪ್ರಮುಖ ಲಿಂಗಾಯತ ಮಠದ ಮುಖ್ಯ ಪೀಠಾಧಿಪತಿಯಾಗಿದ್ದಾರೆ. ಇಬ್ಬರು ಅಪ್ರಾಪ್ತರ ಪರವಾಗಿ ದೂರು ದಾಖಲಾದ ನಂತರ ಮೈಸೂರು ನಗರ ಪೊಲೀಸರು ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಠದಿಂದ ನಡೆಸಲ್ಪಡುವ ಶಾಲೆಯಲ್ಲಿ ಕಲಿಯುತ್ತಿರುವ 15 ಮತ್ತು 16 ವರ್ಷದ ಇಬ್ಬರು ಬಾಲಕಿಯರು ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

