ಶಿವಮೊಗ್ಗ, ಸೆ.೦೩:
ಹಾಲಿ ಶಾಸಕರು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರದೇ ತಮ್ಮ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಮತದಾರರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ತಿಳಿಸಿದರು.
ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿ ಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂ ದನೆ ಸ್ವೀಕರಿಸಿ ಅವರು ಮಾತನಾಡಿದರು.
ಪ್ರಚಾರಕ್ಕೆ ನರೇಂದ್ರ ಮೊದಿಯವರೂ ಬರುವು ದಾಗಿ ಹೇಳಿದ್ದಾರೆ. ಎಲ್ಲ ರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ನಮ್ಮದೇ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲರೊಂದಿಗೆ ಮಾತನಾಡಿ ಶೀಘ್ರದ ಲ್ಲಿಯೇ ದಿನಾಂಕ ನಿಗದಿ ಪಡಿಸಿ ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗುವುದು. ತಿಂಗಳಿಗೊಮ್ಮೆ ರಾಜ್ಯಕ್ಕೆ ಖುದ್ದಾಗಿ ಬರುವುದಾಗಿ ಪ್ರಧಾನಿ ಅವರೇ ಹೇಳಿದ್ದಾರೆ. ಮೋದಿಜೀ ಅವರನ್ನು ಕರೆಸುವ ಕೆಲಸ ಮಾಡಲಾಗುವುದು ಎಂದರು.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟಾಧ್ಯಕ್ಷ ಜೆ.ಪಿ. ನಡ್ಡಾರವರಿಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ೧೫೦ ಸ್ಥಾನಗಳನ್ನು ಗೆಲ್ಲಬೇಕೆಂಬುದು ಪ್ರಧಾನಿ ಮೋದಿ ಅವರ ಅಪೇಕ್ಷೆಯಾಗಿದ್ದು, ಆ ನಿಟ್ಟಿನಲ್ಲಿ ಪ್ರತಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿರುವುದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆ ಹಾಗೂ ಚುನಾವಣೆಗೆ ಸಿದ್ಧರಾಗಬೇಕು ಎಂದು ಹೇಳಿದರು.
ಮಹಿಳಾ ಮೋರ್ಚಾ ಮತ್ತು ಯುವ ಮೋರ್ಚಾ ಬಲಪಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದ್ದಾರೆ. ಅದರಂತೆ ಯುವಕರಲ್ಲಿ ಪಕ್ಷದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು ಎಂದರು.
ಶಾಸಕ ಕೆ.ಎಸ್. ಈಶ್ವ ರಪ್ಪ ಅಭಿನಂದಿಸಿ ಮಾತ ನಾಡಿ, ದೇಶಕ್ಕೆ ಮೋದಿ ಹೇಗೋ ಹಾಗೆಯೇ ರಾಜ್ಯಕ್ಕೆ ಯಡಿಯೂರಪ್ಪ ನವರಿದ್ದಾರೆ. ಗ್ರಾಪಂ ಸದಸ್ಯನಿಂದ ಹಿಡಿದು ರಾಷ್ಟ್ರಮಟ್ಟದ ನಾಯಕ ರವರೆಗೂ ಅಭಿನಂದನೆ ಸಲ್ಲಿಸಲಾಗುತ್ತಿದೆ. ಎಲ್ಲ ವರ್ಗಕ್ಕೆ ನ್ಯಾಯ ಕೊಡುವ ನಾಯಕ ಬಿ.ಎಸ್.ವೈ. ಮಾಡಿದ್ದಾರೆ. ಹೀಗಾಗಿಯೇ ಕೇಂದ್ರ ನಾಯಕರು ತೀರ್ಮಾನಿಸಿ ಅವರಿಗೆ ದೊಡ್ಡ ಹುದ್ದೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸಚಿವರಾದ ಆರಗ ಜ್ಞಾನೇಂದ್ರ, ಕೆ.ಸಿ. ನಾರಾಯಣಗೌಡ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಕೆ.ಬಿ. ಅಶೋಕ್ ನಾಯ್ಕ್, ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಗದೀಶ್, ಮಾಜಿ ಶಾಸಕರಾದ ಬಿ. ಸ್ವಾಮಿರಾವ್, ಕೆ.ಜಿ. ಕುಮಾರಸ್ವಾಮಿ ಇದ್ದರು.