ಶಿವಮೊಗ್ಗ: ಹೊಳೆ ಬಸ್ ನಿಲ್ದಾಣದ ಬಳಿಯಲ್ಲಿನ ಹೊಸ ಸೇತುವೆ ಮೇಲೆ ಖಾಸಗಿ ಸಿಟಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇAದು ಸಂಜೆ ಸೇತುವೆ ಮೇಲೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮವಾಗಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಬಹಳಷ್ಟು ನಜ್ಜುಗುಜ್ಜಾಗಿದ್ದು, ಬಸ್ ಸಹ ಹಾನಿಯಾಗಿದೆ.
ಘಟನೆ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.