ಭದ್ರಾವತಿ: ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ.
೧೧:೫೦ರ ವೇಳೆಗೆ ಶಾಸಕ ಬಿ.ಕೆ. ಶಾಸಕ ಸಂಗಮೇಶ್ವರ್ ಅವರು ಗಣಪತಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.


PDF Embedder requires a url attribute

ಹೊಸಮನೆ ತಮಿಳು ಶಾಲೆ ಹಿಂಭಾಗದಿಂದ ಹೊರಟ ಮೆರವಣಿಗೆ ಹೊಸಮನೆ ಶಿವಾಜಿ ವೃತ್ತ ತಲುಪಿ ಆನಂತರ ಹೊಸಮನೆ ಮುಖ್ಯ ರಸ್ತೆ, ರಂಗಪ್ಪ ವೃತ್ತ, ಸಿಎನ್ ರಸ್ತೆ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಹುತ್ತಾ ಬಸ್ ನಿಲ್ದಾಣ ತಲುಪಿ ಮತ್ತೆ ಇದೇ ಮಾರ್ಗವಾಗಿ ರಾತ್ತಿ ವೇಳೆಗೆ ನಗರಸಭೆ ಮುಂಭಾಗದಲ್ಲಿ ಭದ್ರಾನದಿಯಲ್ಲಿ ವಿಸರ್ಜನೆಗೊಳ್ಳಲಿದೆ.


ಮೆರವಣಿಗೆಯಲ್ಲಿ ಪೊಲೀಸ್ ಸರ್ಪಗಾವಲು
ಮೆರವಣಿಗೆ ಸಾಗುವ ಹಾದಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಜ್ಜೆ ಹೆಜ್ಜೆಗೂ ಖಾಕಿ ಕಣ್ಗಾವಲಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ನಗರದಲ್ಲಿ ಬೀಡುಬಿಟ್ಟಿದೆ.


ಮುಂಜಾನೆಯಿಂದಲೇ ಹತ್ತಾರು ಕಡೆ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯುತ್ತಿದೆ. ರಾಜಬೀದಿ ಉತ್ಸವ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ವಿವಿಧ ಸಂಘ-ಸಂಸ್ಥೆಗಳಿಂದ ಪ್ರಸಾದ ವಿನಿಯೋಗ ಹಾಗೂ ಅನ್ನಸಂರ್ಪಣೆ ಮಾಡಲಾಗುತ್ತಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!