ಶಿವಮೊಗ್ಗ : ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.

ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು.
ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ.
ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯುತ್ತಿದೆ.
ರಾರಾಜಿಸಿದ ಪುನೀತ್ ಬಾವುಟಗಳು
ಗಣಪತಿಯ ರಾಜಬೀದಿ ಉತ್ಸವದಲ್ಲಿ ಕೆಲ ಯುವಕರು, ಮೆರವಣಿಗೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಹಾಗೂ ಬಾಬುಟಗಳು ರಾರಾಜಿಸುತ್ತಿವೆ.