ಶಿವಮೊಗ್ಗ,
ಕೇಂದ್ರ ಸರ್ಕಾರ ಕೊಟ್ಟ ಅಕ್ಕಿಗೆ ಸಿದ್ಧರಾಮಯ್ಯ ತಮ್ಮ ಫೋಟೋ ಹಾಕಿ ಪ್ರಚಾರ ಪಡೆದಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.


ಬಿಜೆಪಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾ ಡಿದ ಅವರು, ಈಗ ಭ್ರಷ್ಟಾಚಾರದ ಬಗ್ಗೆ ಮಾತನಾ ಡುತ್ತಿದ್ದಾರೆ. ಕಾಂಗ್ರೆಸ್ ಗುತ್ತಿಗೆದಾರ ಪುಢಾರಿಗಳು ಕಾಮಗಾರಿ ಮಾಡಿ ಬಿಲ್ ನೀಡುತ್ತಿಲ್ಲ ಎಂದು ಬೇಕಾಬಿಟ್ಟಿಯಾಗಿ ೪೦ ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಾ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದರು.


ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ತಲೆಕೆಡಿಸಿಕೊಳ್ಳ ಬೇಕಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಕಾರ್ಯಕರ್ತರು ಜನರ ಮನೆಗೆ ತಲುಪಿಸುವ ಮೂಲಕ ಜನರ ವಿಶ್ವಾಸ ಪಡೆದು ಪಕ್ಷವನ್ನು ಪುನಃ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಕೇಂದ್ರದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂದು ಹೇಳಿದರು.


ಕಾಂಗ್ರೆಸ್ ನಾಯಕರು ಏನೇ ಟೀಕೆ ಮಾಡಿದರೂ ಪ್ರಜ್ಞಾವಂತ ಮತದಾರರಿಗೆ ಬಿಜೆಪಿ ಏನೆಂದು ಗೊತ್ತಿದೆ. ಉತ್ತರ ಪ್ರದೇಶ, ಗೋವಾದಲ್ಲಿ ಬಿಜೆಪಿ ಮತ್ತೊಮ್ಮೆ ಬರುವುದಿಲ್ಲ ಎಂದು ಶತಾಯಗತಾಯ ಪ್ರಚಾರ ಮಾಡಲಾಗಿತ್ತು. ಆದರೆ, ಮತದಾರರು ಕೈಹಿಡಿದಿದ್ದಾರೆ. ಸಮೀಕ್ಷೆಗಳೆಲ್ಲಾ ಉಲ್ಟಾಪಲ್ಟಾ ಆಗಿವೆ. ಅದೇ ಸ್ಥಿತಿ ಕರ್ನಾಟಕದಲ್ಲೂ ಆಗಲಿದೆ ಎಂದು ಹೇಳಿದರು.


ಕೋವಿಡ್ ಸಂದರ್ಭವನ್ನು ಪ್ರಧಾನಿ ಮೋದಿ ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಆರೋಗ್ಯ, ಪ್ರವಾಸೋದ್ಯಮವನ್ನು ಚೇತರಿಸಿಕೊ ಳ್ಳುವಂತೆ ಮಾಡಿದ್ದಾರೆ. ವಿಶ್ವದ ಕೆಲವು ರಾಷ್ಟ್ರಗಳು ಆರ್ಥಿಕವಾಗಿ ದುಸ್ಥಿತಿಗೆ ಹೋಗಿದ್ದು, ನಾಯಕರು ಅಧಿಕಾರ ಕಳೆದುಕೊಳ್ಳುವಂತಾಗಿದೆ. ಆದರೆ, ಭಾರತಕ್ಕೆ ಮೋದಿ ಅವರ ಸಮರ್ಥ ನಾಯಕ ತ್ವದಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಕೂಡ ಆ ಸಂದರ್ಭವನ್ನು ಸಮರ್ಥವಾಗಿ ಎದುರಿಸಿದ್ದಾರೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಪ್ರಭಾರಿ ಮೋನಪ್ಪ ಭಂಡಾರಿ, ವಿಭಾಗ ಸಹ ಪ್ರಭಾರಿ ಎನ್.ಎಸ್. ಹೆಗಡೆ, ಆರ್.ಡಿ. ಹೆಗಡೆ ಇದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!