Banglur Crime


ಶಿವಮೊಗ್ಗ: ಪೋಕ್ಸೊ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶಿಕಾರಿಪುರ ತಾಲ್ಲೂಕಿನ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು’ ಎಂದು ಸಾವಿಗೆ ಮುನ್ನ ಯುವಕ ಪತ್ರ ಬರೆದಿದ್ದಾನೆ.


ಬಡವನಾದ ನನ್ನಿಂದ ಹಣ ನೀಡಲು ಸಾಧ್ಯವಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನಮ್ಮ ಪುತ್ರ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಸಂಬಂಧ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೃತ ಯುವಕನ ತಂದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!