ಸರಕಾರಿ ಭೂಮಿ ಸಾಗುವಳಿಯ ಅಕ್ರಮ ಸಕ್ರಮ ಅರ್ಜಿ ಸಲ್ಲಿಕೆಯ ಅವಧಿಯನ್ನು ಒಂದು ವರುಷ
ಗಳ ಕಾಲ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ
ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆ ಇಂದು ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಈ ಕಾಯಿದೆಯ ಪ್ರಕಾರ, ಯಾವುದೇ ವ್ಯಕ್ತಿ ತನ್ನ ಸ್ವಾಧೀನಕ್ಕೆ ಒಳಪಟ್ಟ ಭೂಮಿಯನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಗೊತ್ತುಪಡಿಸಿದ ಅರ್ಹತೆ ಹೊಂದಿದ್ದರೆ ಕಾಯಿದೆ ಜಾರಿಗೆ ಬಂದಂತಹ
ದಿನದಿಂದ ಒಂದು ವರ್ಷದ ಅವಧಿಯಲ್ಲಿ ನಿಯಮ ೬೭ ರ ಅನ್ವಯ ಸೂಕ್ತ ಶುಲ್ಕದೊಂದಿಗೆ ಅರ್ಜಿ ಸಲ್ಲಸಬೇಕಾಗುತ್ತದೆ. ಸಮಿತಿ ಅಕ್ರಮ- ಸಕ್ರಮವನ್ನು ನಿರ್ಧರಿಸುತ್ತದೆ.