ಶಿವಮೊಗ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ಆದಾಯ ಪ್ರವರ್ಗ-೧ರ ವಿದ್ಯಾರ್ಥಿಗಳಿಗೆ ರೂ. ೨.೫೦ ಲಕ್ಷ ಹಾಗೂ ಪ್ರವರ್ಗ-೨ಎ ರ ವಿದ್ಯಾರ್ಥಿಗಳಿಗೆ ರೂ.೨.೦೦ ಲಕ್ಷ ಮೀರಿರಬಾರದು. ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ. ೧೫೦೦/- ರಂತೆ ೧೦ ತಿಂಗಳು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯಾ ವರ್ಷದಲ್ಲಿ ಲಭ್ಯವಿರುವ ಅನುದಾನಕ್ಕೆ ಸೀಮಿತಗೊಳಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಆಸಕ್ತರು ಇಲಾಖೆಯ ವೆಬ್‌ಸೈಟ್ sevasindhu.karnataka.gov.in ಮೂಲಕ ದಿ: ೨೦/೧೦/೨೦೨೨ ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ೧ನೇ ಮಹಡಿ, ಸತ್ಯಶ್ರೀ ಆರ್ಕೆಡ್, ೫ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: ೦೮೧೮೨-೨೨೦೨೦೬ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!