ಶಿವಮೊಗ್ಗ: 5 ನೇ ವಾರ್ಡ್ ಗುರುಪುರ ಭಾಗದ ಕಾಂಗ್ರೆಸ್, ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಎನ್.ಕೆ. ಜಗದೀಶ್, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ. ಕಾಂತೇಶ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ್,

ವಾರ್ಡ್ ಅಧ್ಯಕ್ಷ ಹರೀಶ್ ಮಹಾನಗರ ಪಾಲಿಕೆ ಸದಸ್ಯ ಶಿವಕುಮಾರ್, ಬಿಜೆಪಿ ನಗರ ಉಪಾಧ್ಯಕ್ಷ ಶಿವಾಜಿ, ಎಸ್.ಸಿ. ಉಪಾಧ್ಯಕ್ಷ ಜಗದೀಶ್, ಎಲ್ಲ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು, ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.