ರಾಜ್ಯಪಾಲರ ಜಿಲ್ಲಾ ಪ್ರವಾಸ
ಶಿವಮೊಗ್ಗ ಸೆ.27 :
ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಇವರು ಸೆ.28 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಸೆ.28 ರ ಬೆಳಿಗ್ಗೆ 9.30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಪ್ರವಾಸಿಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 12.30 ಕ್ಕೆ ಚಿತ್ರದುರ್ಗದಿಂದ ಹೊರಟು 2 ಗಂಟೆಗೆ ಶಿವಮೊಗ್ಗದ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 2.20 ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದಿಂದ ಹೊರಟು ಮಧ್ಯಾಹ್ನ 2.50 ಕ್ಕೆ ಸಾಗರ ತಾಲ್ಲೂಕಿನ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಬರುವರು.



