ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಪಾರ್ಕ್ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದರು. ವಾಯುವಿಹಾರಿಗಳ ಜೊತೆ ಸಮಸ್ಯೆಯನ್ನು ಆಲಿಸಿದರು

. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಂಗಲ್ ರೆಸಾರ್ಟ್ ನಿರ್ದೇಶಕ ರಾಜೇಶ್ ಕಾಮತ್, ಪ್ರಮುಖರಾದ ದಿವಾಕರ ಶೆಟ್ಟಿ ಸೇರಿದಂತೆ ಹಲವರಿದ್ದರು.