ಶಿವಮೊಗ್ಗ, ಸೆ.30: ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ವಾಸಿ ಆರ್ಮುಗಂ, ಈತನು 10 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದುನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಲಂ 376 (A,B), 506 ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಂದಿನ ತನಿಖಾಧಿಕಾರಿಗಳಾದ ಮಂಜುನಾಥ್, ಇ. ಒ, ಸಿಪಿಐ, ಭದ್ರಾವತಿ ಗ್ರಾಮಾಂತರ ವೃತ್ತ ರವರು ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ದಿನಾಂಕ 30-09-2022 ರಂದು ಆರೋಪಿ ಆರ್ಮುಗಂ, 38 ವರ್ಷ, ಭದ್ರಾವತಿ ತಾಲ್ಲೂಕು ಈತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!