ಶಿವಮೊಗ್ಗ,ಅ.1: ಗಾಂಧಿ ಜಯಂತಿ ಅಂಗವಾಗಿ ದೆಹಲಿಯಲ್ಲಿ ನಡೆಯುವ ಸ್ವಚ್ಛಭಾರತ್ ದಿವಸ್ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿ.ಪಂ ನಿಕಟ ಪೂರ್ವ ಸಿಇಓ ರವರಿಗೆ ಹಾಗೂ ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ.


ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ, ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ ಯೋಜನೆಯ 8ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಾಳಿನ 2ನೇ ಅಕ್ಟೋಬರ್ 2022ರ ಮಹಾತ್ಮ ಗಾಂಧಿಯವರ ಜನ್ಮದಿನದಂದು ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮವನ್ನು ನವದೆಹಲಿಯ ವಿದ್ಯಾರ್ಥಿ ಭವನದಲ್ಲಿ ರಾಷ್ಟ್ರಪತಿಗಳ ಅಧ್ಯಕ್ಷತೆಯ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘಟಕಾಂಶಗಳು ಉತ್ತಮವಾಗಿ ಅನುಷ್ಠಾನ ಮಾಡಿರುವ DC/CEO/DOCS/DPROs/B0s/Sarpanches 10 ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ನಿಯೋಜಿಸಲು ಅವಕಾಶ ಕಲ್ಪಿಸಲಾಗಿದೆ.


ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್‌ (ಗ್ರಾ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ, ದ್ರವ್ಯತ್ಯಾಜ್ಯ ನಿರ್ವಹಣೆ, ಶೌಚಾಲಯಗಳ ಬಳಕೆಯ ಕುರಿತು ಜಾಗೃತ ಕಾರ್ಯಕ್ರಮಗಳು, ಸುಜಲಾಂ 2.೦ ಅಡಿ ಇಂಗು ಗುಂಡಿಗಳ ನಿರ್ಮಾಣ ಮುಂತಾದ ಚಟುವಟಿಕೆಗಳಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿದ ಹಿನ್ನಲೆಯಲ್ಲಿ ಜಿ‌.ಪಂ ನಿಟಕ ಪೂರ್ವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ ಎಲ್ ವೈಶಾಲಿ ರವರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಹಾಗೆಯೇ ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಎಲ್ಲಾ ಘಟಕಾಂಶಗಳ ಅನುಷ್ಠಾನ ಮಾಡಿರುವ ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎ. ನ್ಯಾಮತುಲ್ಲಾ ಖಾನ್ ರವರಿಗೆ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!