ಶಿವಮೊಗ್ಗ, ಸೆ.09:
ಜಿಲ್ಲೆಯಲ್ಲಿ ಇಂದು 335 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದ್ದು ಒಟ್ಟು ಪಾಸಿಟಿವ್ ಸಂಖ್ಯೆ 1039ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಇಂದು ಸಹ ಸೋಂಕಿನಿಂದ 6 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 180 ಕ್ಕೇರಿದೆ. ಇಂದು 1826 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. 1430 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ.
ಇಂದು 308 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 7822 ಕ್ಕೇರಿದೆ. 198 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 240 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 284 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 1454 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 121 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 2297 ಎಂದು ಬುಲಿಟಿನ್ ತಿಳಿಸಿದೆ.
ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 4449 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು ಸಹ 4571 ಕಂಟೈನ್ಮೆಂಟ್ ಜೋನ್ ಗಳೇ ಇವೆ. 1480 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 1524 ರಷ್ಟೇ ಇದೆ ಎಂದು ಬುಲಿಟಿನ್ ಪ್ರಕಟಿಸಿವೆ.
ತಾಲೂಕುವಾರು ವಿವರ.
ಜಿಲ್ಲೆಯಲ್ಲಿ 335
ಶಿವಮೊಗ್ಗ -169
ಭದ್ರಾವತಿ-37,
ಶಿಕಾರಿಪುರ-83, ತೀರ್ಥಹಳ್ಳಿ-11,
ಸಾಗರ- 13, ಹೊಸನಗರ–02 ಸೊರಬ- 13
ಇತರೆ ಜಿಲ್ಲೆ- 07