ಜಿಲ್ಲಾಡಳಿತ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಇವರುಗಳ ಸಂಯುಕ್ತಾಶ್ರಯದಲ್ಲಿ octಕ್ಟೋಬರ್ ೧೨ರಂದು ಬೆಳಿಗ್ಗೆ ೧೦.೩೦ರಿಂದ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕಿನ ಬ್ಯಾಂಕುಗಳ ಗ್ರಾಹಕರಿಗಾಗಿ ಬ್ಯಾಂಕ್-ಡಿಜಿಟಲ್ ಪಾವತಿ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.


ಈ ಮಾಹಿತಿ ಕಾರ್ಯಾಗಾರವನ್ನು ರಾಜ್ಯ ರೇಷ್ಮೇ, ಯುವಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಕೆ.ಸಿ.ನಾರಾಯಣಗೌಡ ಅವರು ಉದ್ಘಾಟಿಸುವರು. ಕೇಂದ್ರೀಯ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ನಿಕಟಪೂರ್ವ ಮಾನ್ಯ ಮುಖ್ಯಮಂತ್ರಿ

ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ

ಜಿಲ್ಲೆಯ ಎಲ್ಲಾ ವಿಧಾನ ಪರಿಷತ್, ವಿಧಾನಸಭಾ ಶಾಸಕರುಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ನಿರ್ದೇಶಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿರುವರು ಎಂದು ಜಿಲ್ಲಾ ಅಗ್ರಣೀಯ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಎಂ.ಡಿ.ಯತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!