ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ಹುಟ್ಟು ಹಬ್ಬದ ಅಂಗವಾಗಿ ಯಂಗ್ ಬ್ರೀಗೇಡ್ ಹಾಗೂ ಅಭಿಮಾನಿ ಬಳಗದ ವತಿಯಿಂದ ಇಂದು ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.


ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎನ್. ರಮೇಶ್, ಮಂಜುನಾಥ್ ಭಂಡಾರಿಯವರು ಸರಳ ವ್ಯಕ್ತಿತ್ವದವರು. ಶೈಕ್ಷಣಿಕ ಸಂಸ್ಥೆಗಳ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಜಾತಿ, ಧರ್ಮ ನೋಡದೆ ಸಾಮರಸ್ಯಕ್ಕಾಗಿ ಪ್ರಯತ್ನಿಸಿದವರು. ಯುವಕರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಕಟ್ಟುವಲ್ಲಿ ಅವರ ಪಾತ್ರ ಹೆಚ್ಚಾಗಿದೆ. ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ. ಮತ್ತಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಲಿ ಎಂದರು.


ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಪಿ.ದಿನೇಶ್, ವಿಜಯಕುಮಾರ್, ದೇವಿಕುಮಾರ್, ಪೂರ್ಣೇಶ್, ರವಿಕುಮಾರ್, ಮೋಹನ್, ಲಕ್ಷ್ಮಿಕಾಂತ್, ಉಮೇಶ್, ಮುರಳಿ, ಹನುಮಂತ, ನಾಗರಾಜ್, ಸೀತಾರಾಮ್ ಸೇರಿದಂತೆ ಹಲವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!