ಶಿವಮೊಗ್ಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

ರಾಜ್ಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಇದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18 ರವರೆಗೂ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 14 ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಸೇರಿ ಕೆಲವು ಜಿಲ್ಲೆಗಳಲ್ಲಿ  64.5ರಿಂದ 115.5 ಮಿಮೀವರೆಗೂ ಮಳೆ ನಿರೀಕ್ಷೆ ಇದೆ.

ಅಕ್ಟೋಬರ್ 15ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 16ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 18ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.

By admin

ನಿಮ್ಮದೊಂದು ಉತ್ತರ

error: Content is protected !!