ಶಿವಮೊಗ್ಗ, ಅ.15:
ಕೋವಿಡ್ ಸಂದರ್ಭದಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಬಿಸಿಯೂಟದ ಕಚ್ಚಾ, ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ವಿತರಿಸಿರುವಂತೆಯೇ ಈ ವರ್ಷದ ಮಳೆಗಾಲ ಮುಗಿಯುವವರೆಗೂ ಸಹ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಗುಡ್ಡ ಗಾಡು ಪ್ರದೇಶಗಳಲ್ಲಿನ ಮಾತೃಪೂರ್ಣ ಯೋಜನೆಯಡಿಯ ಫಲಾನುಭವಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಯಾರಿಗಾದರೂ ಅಂಗನವಾಡಿ ಕೇಂದ್ರಗಳಿಗೆ ಬಂದು ಹೋಗಲು ಅನಾನುಕೂಲತೆ ಇದ್ದಲ್ಲಿ ಅವರ ಮನವಿ ಮೇರೆಗೆ ಕಚ್ಚಾ, ಆಹಾರ ಪದಾರ್ಥಗಳನ್ನು (Take Home Ration) ಮನೆಗೆ ತೆಗೆದುಕೊಂಡು ಹೋಗಲು ಸರ್ಕಾರ ಆದೇಶಿಸಿತ್ತು.


ಮೇಲ್ಕಂಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ ಜಿಲ್ಲೆಯವರಿಗೂ ಸಹ ಆಹಾರ ಪದಾರ್ಥಗಳನ್ನು (Take Home Ration) ಮನೆಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಲು ಕ್ರಮವಹಿಸುವಂತೆ ವಿಧಾನ ಪರಿಷತ್ ಶಾಸಕ ಡಿ ಎಸ್ ಅರುಣ್ ರವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿದ್ದರು.


ಮನವಿ ಸ್ವೀಕರಿಸಿದ ಸಚಿವರು ಶಿವಮೊಗ್ಗ ಜಿಲ್ಲೆಯಲ್ಲಿನ ಗುಡ್ಡಗಾಡು ಪ್ರದೇಶಗಳಲ್ಲಿನ ಮಾತೃಪೂರ್ಣ ಯೋಜನೆಯಡಿಯ ಫಲಾನುಭವಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ, ಯಾರಿಗಾದರೂ ಅಂಗನವಾಡಿ ಕೇಂದ್ರಗಳಿಗೆ ಬಂದು ಹೋಗಲು ಅನಾನುಕೂಲತೆ ಇದ್ದಲ್ಲಿ, ಅವರ ಮನವಿ ಮೇರೆಗೆ ಕಚ್ಚಾ, ಆಹಾರ ಪದಾರ್ಥಗಳನ್ನು (Take Home Ration) ಮನೆಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಲು ಕ್ರಮವಹಿಸುವಂತೆ ಸೂಚಿಸಿದ್ದಾರೆ. ಇದಕ್ಕಾಗಿ ಸಹಕರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ಅವರಿಗೂ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೂ ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಹಾಗು ವಿಧಾನ ಪರಿಷತ್ ಸದಸ್ಯರಿಗೆ ಡಿ.ಎಸ್.ಅರುಣ್ ಅಭಿನಂದಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!