ಶಿವಮೊಗ್ಗ: ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಇಂದು ಸಂಜೆ ಸ್ಟೈಲ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಿಂದ ಅಪ್ಪು ಪುನರ್ ಜನ್ಮೋತ್ಸವ ಕಾರ್ಯಕ್ರಮನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಅಪ್ಪು ಅವರ ಹಾಡಿಗೆ ಸಾಮೂಹಿಕ ನೃತ್ಯ ಮತ್ತು ಅಭಿಮಾನಿಗಳಿಂದ ಮೌನಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಶಿವಮೊಗ್ಗದ ಎಲ್ಲಾ ಪವರ್ ಸ್ಟಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.