ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಯಾಟಲೈಟ್ ಸ್ಟೇಷನನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದ್ದಾರೆ.
ಮಲ್ಲೇಶ್ವರ ಬಾಲಕರ ಶಾಲೆಯಲ್ಲಿ ಸ್ಯಾಟಲೈಟ್ ಸ್ಟೇಷನ್ ಉದ್ಘಾಟಿಸಿದ ಮುಖ್ಯಮಂತ್ರಿಗಳು ಪುನೀತ್ ರಾಜಕುಮಾರ್ ಅವರನ್ನು ನೆನೆದು ಭಾವುಕರಾದರು.

ಇನ್ನು, ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 1.90 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಜಿಎಸ್ 3 ಉಪಗ್ರಹವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಲ್ಲಿ ಒಂದು ಸ್ಯಾಟಲೈಟ್’ಗೆ ಪುನೀತ್ ಹೆಸರನ್ನು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ಶೀಘ್ರವೇ ನಭಕ್ಕೆ ಹಾರಲಿದೆ.