ಶಿವಮೊಗ್ಗ,ಅ.೨೯: ನ.೬ರಂದು ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದು, ಕೆಪಿಸಿಸಿ ವತಿಯಿಂದ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೫೦ ವರ್ಷಗಳ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಇಡೀ ರಾಜ್ಯಕ್ಕೆ ಸಂತೋಷ ತಂದಿದೆ. ಈ ಬಗ್ಗೆ ನಾಳೆ ಪೂರ್ವಭಾವಿ ಸಿದ್ಧತಾ ಸಭೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಖರ್ಗೆಯವರ ಅಧ್ಯಕ್ಷತೆ ರಾಜ್ಯಕ್ಕೆ ದೊಡ್ಡ ಶಕ್ತಿ ತಂದಿದೆ ಎಂದರು.


ಈ ಕಾರ್ಯಕ್ರಮದಲ್ಲಿ ಎಲ್ಲಾ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು, ಜಿಪಂ ಹಾಗೂ ಗ್ರಾಪಂ ಸದ್ಸಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅವರಿಗೆ ಶುಭ ಕೋರುವ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ.
ಖರ್ಗೆಯವರ ನಿಷ್ಠೆ, ಪ್ರಾಮಾಣಿಕತೆ ಗುರುತಿಸಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದು,

ಇದು ಕಾಂಗ್ರೆಸ್ ಪ್ರಜಾಪ್ರಭುತ್ವಕ್ಕೆ ಮಾದರಿಯಾಗಿದೆ. ಕಾಂಗ್ರೆಸ್‌ನಲ್ಲಿ ಮಾತ್ರ ಇದು ಸಾಧ್ಯ. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ನಾನು ಮನವಿ ಮಾಡಿಕೊಂಡಿದ್ದು, ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದು ಸತ್ಯಾಸತ್ಯತೆಯ ತನಿಖೆ ನಡೆಸಬೇಕು. ತೆಲಂಗಾಣದಲ್ಲಿ ಆಪರೇಷನ್ ಕಮಲದ ಪ್ರಯತ್ನ ನಡೆದಿದೆ. ಕರ್ನಾಟಕ ಸೇರಿದಂತೆ ದೇಶದ ಇತರೆಡೆಗಳಲ್ಲೂ ಆಪರೇಷನ್ ಕಮಲ ನಡೆದಿದ್ದು, ಈ ಆಪರೇಷನ್ ಕಮಲಕ್ಕೆ ಮನಿ ಲ್ಯಾಂಡಿಂಗ್ ಕಾಯಿದೆಯಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುಮೋಟೊ ಪ್ರಕರಣ ದಾಖಲಿಸಿ ತನಿಖೆನಡೆಸುವಂತೆ ಅವರು ಮನವಿ ಮಾಡಿದ್ದಾರೆ.


ರಾಜ್ಯದ ಸಚಿವ ಎಂಟಿಬಿ ನಾಗರಾಜ್ ಪಿಎಸ್‌ಐ ವರ್ಗಾವಣೆಗೆ ೮೦ಲಕ್ಷ ರೂ. ಲಂಚದ ವಿಚಾರದ ಆಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಲೋಟಸ್‌ನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಸುಮೋಟೊ ಪ್ರಕರಣದಿಂದ ಇದರ ಸತ್ಯಾಸತ್ಯತೆ ಬಯಲಿಗೆ ಬರಲಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ ಹೆಚ್.ಎಸ್. ಸುಂದರೇಶ್, ಆರ್.ಎಂ. ಮಂಜುನಾಥ ಗೌಡ, ಎನ್. ರಮೇಶ್ ಮೊದಲಾದವರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!