ಶಿವಮೊಗ್ಗದಲ್ಲಿ ನಾಥ ಪರಂಪರೆ ಕುರಿತು ಉಪನ್ಯಾಸ ಮಾಲೆ, ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಧರ್ಮದ ಸಮಗ್ರ ಚಿಂತನೆಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುವ ಚಿಂತನೆಯೂ ಶ್ರೀ ಆದಿಚುಂಚನಗಿರಿ ಅಂಗಳದಲ್ಲಿ ಮೂಡಿದೆ.


ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯಿಂದ , ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಶಿಮೊಗ್ಗ ಶಾಖಾ ಮಠದ ೩೨ನೇ ವಾರ್ಷಿಕೋತ್ಸವವನ್ನು ನ.೩,ಹಾಗೂ ನ. ೪-೫ ರಂದು ಶಾಖಾ ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ.

Tungataranga Daily/ ಶಿವಮೊಗ್ಗ ಆದಿಚುಂಚನಗಿರಿ ಮಠದ ವಾರ್ಷಿಕೋತ್ಸವ, ಕಾರ್ಯಕ್ರಮದ ಸಮಗ್ರ ಮಾಹಿತಿ ಇಲ್ಲಿದೆ ನೋಡಿ

ವೀಡಿಯೋ ನೋಡಿ..,


ಯುಗ ಯೋಗಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಯವರ ದಿವ್ಯಾನುಗ್ರಹದೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ೭೨ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾ ನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಈ ದಿವ್ಯ ಸತ್ಸಂಗ,ಧರ್ಮ ಸಂಕಥನ ಹಾಗೂ ಸಾಧಕರಿಗೆ ಸನ್ಮಾನ, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ನವೆಂಬರ್ ೩ ರಂದು ಸಂಜೆ ೫.೩೦ ಗಂಟೆಗೆ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶಿವಮೊಗ್ಗ ಶಾಖಾ ಮಠದ ೩೨ ನೇ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಪೂಜ್ಯ ಶ್ರೀಗಳ ಸಮ್ಮುಖದಲ್ಲಿ ನಡೆಯಲಿದ್ದು, ಅಂದು ಪೂಜ್ಯ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು.


ನವಂಬರ್ ೪ ರಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪೂಜ್ಯ ಶ್ರೀಗಳ ಸಾನ್ನಿಧ್ಯದಲ್ಲಿ ನಾಥ ಪರಂಪರೆ ಕುರಿತು ಉಪನ್ಯಾಸ ಮಾಲೆಯನ್ನು ಏರ್ಪಡಿ ಸಲಾಗಿದೆ. ಅಂದು ಸಂಜೆ ೫.೩೦ ಗಂಟೆಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ
ಪೂಜ್ಯಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ವಾರ್ಷಿಕೋತ್ಸವ ಸಮಾರೋಪ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಗುರುನಮನ ಕಾರ್ಯಕ್ರಮ ನಡೆಯುವುದು,


ಅಂದು ವೈದ್ಯಕೀಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನಿ ಸಲಾಗುವುದು. ನ.೫ ರ ಶನಿವಾರ ಬೆಳಿಗ್ಗೆ ೯ ಗಂಟೆಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಹಿರಿಯ ವಿದ್ಯಾರ್ಥಿಗಳ “ಸ್ನೇಹ ಸಮ್ಮಿಲನ” ಕಾರ್ಯ ಕ್ರಮ ನಡೆಯುವುದು. ಶ್ರೀ ಮಠದ ಶಾಖೆಯ ಶ್ರೀಗಳು, ಜನ ಪ್ರತಿನಿಧಿಗಳು ಭಾಗವಹಿಸಲಿದ್ದು,

By admin

ನಿಮ್ಮದೊಂದು ಉತ್ತರ

You missed

error: Content is protected !!