ಶಿವಮೊಗ್ಗ : ಅಕ್ರಮವೆಸಗಿರುವ ಭದ್ರಾವತಿ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವರ್ತನೆ ಖಂಡಿಸಿ ನ.1ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದೆಂದು ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ತಿಳಿಸಿದರು.
ಅವರು ಇಂದು ಮೀಡಿಯಾಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭದ್ರಾವತಿ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿನ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಣೆಯಲ್ಲಿ ಅಕ್ರಮವೆಸಗುತ್ತಿದ್ದಾರೆ. ಇದರಿಂದ ಕೋಟ್ಯಂತರ ರೂ. ಭ್ರμÁ್ಟಚಾರ ನಡೆಯುತ್ತಿದೆ ಎಂದು ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಆಹಾರ ಇಲಾಖೆ ಅಧಿಕಾರಿಗಳಾದ ಗಾಯತ್ರಿ ಮತ್ತು ಜಾನಕಿ ಇವರು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದರು.
ಇದೇ ವಿಷಯವಾಗಿ ಲಂಚ ಮುಕ್ತ ಕರ್ನಾಟಕ ವೇದಿಕೆ ವತಿಯಿಂದ ಭದ್ರಾವತಿ ತಾಲ್ಲೂಕು ಕಚೇರಿ ಎದುರು ನಿರಂತರ ಹೋರಾಟ ಮಾಡಿದ್ದರೂ ಕ್ರಮ ಜರುಗಿಸಿಲ್ಲ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಕೂಡ ಸ್ಪಂದನೆ ಇಲ್ಲ. ಹೀಗಾಗಿ ಸಚಿವರ ಗಮನಸೆಳೆಯಲು ಹೋರಾಟ ಅನಿವಾರ್ಯ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ. ಬಿ.ಎನ್. ರಾಜು, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಎಸ್.ಕೆ. ಪ್ರಭು, ಕೆಎಸ್‍ಆರ್ ಪಕ್ಷದ ಶರತ್ ಕುಮಾರ್, ರವಿ, ಜಾಕೀರ್, ಅಯಾಜ್ ಮತ್ತಿತರರು ಇದ್ದರು.