ಶಿವಮೊಗ್ಗ, ಸೆ.14:
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 248 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದ್ದು ಒಟ್ಟು ಪಾಸಿಟಿವ್ ಸಂಖ್ಯೆ 11131 ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಇಂದು ಸಹ ಸೋಂಕಿನಿಂದ 5 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 207 ಕ್ಕೇರಿದೆ.
ಇಂದು 1027 ಜನರಿಗೆ ಕೊರೋನ ಪರೀಕ್ಷೆ ನಡೆಸಿದ್ದು,. 850 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ.
ಇಂದು 299 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 9040 ಕ್ಕೇರಿದೆ.
217 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 163 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 287 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 1435 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 164 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 2266 ಎಂದು ಬುಲಿಟಿನ್ ತಿಳಿಸಿದೆ.
ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ.
ನಿನ್ನೆಯ ವರೆಗೆ 4944 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು ಸಹ 5115 ರಷ್ಟೇ ಕಂಟೈನ್ಮೆಂಟ್ ಜೋನ್ ಗಳಿವೆ. 1699 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 1759 ರಷ್ಟೇ ಇದೆ ಎಂದು ಬುಲಿಟಿನ್ ಪ್ರಕಟಿಸಿವೆ.
ತಾಲೂಕು ವಿವರ
ಜಿಲ್ಲೆಯಲ್ಲಿ 248 ಶಿವಮೊಗ್ಗ-110
ಭದ್ರಾವತಿ-82,
ಶಿಕಾರಿಪುರ-23,
ತೀರ್ಥಹಳ್ಳಿ-04,
ಸಾಗರ- 09,
ಹೊಸನಗರ-07
ಸೊರಬ-09
ಇತರೆ ಜಿಲ್ಲೆ- 04