ಶಿವಮೊಗ್ಗ,ನ.11: ಹಾಲ್ ಲಕ್ಕವಳ್ಳಿ ಗ್ರಾಮದ ವಾಸಿ ಮಂಜುನಾಥನು ತನ್ನ ಹೆಂಡತಿಗೆ ಕೌಟುಂಬಿಕ ಕಿರುಕುಳ ನೀಡಿ, ದಿನಾಂಕಃ-16-11-2018 ರಂದು ಜಗಳ ತೆಗೆದು ಕೊಲೆ ಮಾಡಿದ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ವಸಂತ್ ಕುಮಾರ್, ಸಿಪಿಐ,ದೊಡ್ಡಪೇಟೆ ವೃತ್ತರವರು ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮಾನು ಕೆ. ಎಸ್ ರವರು ದಿನಾಂಕ:-11-11-2022 ರಂದು ಆರೋಪಿ ಮಂಜುನಾಥ @ ಮಂಜ, 36 ವರ್ಷ, ಹಾಲ್ ಲಕ್ಕವಳ್ಳಿ ಶಿವಮೊಗ್ಗ ಈತನ ವಿರುದ್ಧ *ಕಲಂ 302 ಐಪಿಸಿ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ *ಜೀವಾವಧಿ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.