ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಮಹಾಮಾರಿಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 66ಕ್ಕೇರಿಕೆಯಾಗಿದೆ.
ಇಂದು ಮತ್ತೆ 161 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 164 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
161 ಸೋಂಕಿತರ ಪೈಕಿ 91 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, 24 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.
ಇಲ್ಲಿಯವರೆಗೆ 2605 ಮಂದಿ ಗುಣಮುಖರಾಗಿದ್ದು, 3248 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 12 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದ 65 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಜೂನ್ 3ರಂದು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ರಕ್ತದೊತ್ತಡ, ಮಧುಮೇಹ, ಕಿಡ್ನಿ ತೊಂದರೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಇವರು ಸೋಮವಾರ ಮೃತಪಟ್ಟಿದ್ದಾರೆ.
ಕಲಬುರಗಿಯ 17 ವರ್ಷದ ಯುವತಿ ಸೋಂಕಿನ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಜ್ವರ, ತಲೆನೋವು, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜೂ.4ರಂದು ಆಸ್ಪತ್ರೆಗೆ ದಾಖಲಾದ ಇವರು ಅದೇ ದಿನ ಮರಣ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಯಾದಗಿರಿಯಲ್ಲಿ 61, ಬೆಂಗಳೂರು ನಗರದಲ್ಲಿ 29, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23, ಕಲಬುರಗಿಯಲ್ಲಿ 10, ಬೀದರ್ ನಲ್ಲಿ 9, ದಾವಣಗೆರೆಯಲ್ಲಿ 8, ಕೊಪ್ಪಳದಲ್ಲಿ 6, ಶಿವಮೊಗ್ಗದಲ್ಲಿ 4, ವಿಜಯಪುರ, ಚಿಕ್ಕಬಳ್ಳಾಪುರ, ಮೈಸೂರು ಮತ್ತು ಧಾರವಾಡದಲ್ಲಿ ತಲಾ 2, ಬಾಗಲಕೋಟೆ, ತುಮಕೂರು, ಚಾಮರಾಜನಗರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಶಿವಮೊಗ್ಗದಲ್ಲಿ ನಾಲ್ವರಿಗೆ ಕೋರನ ಪಾಸಿಟಿವ್: ಕೋರನ ಕುರಿತು ರಾಜ್ಯ ಹಾಗೂ ಜಿಲ್ಲಾ ವ್ಯಾಪಿಯ ಮಾಹಿತಿಯು ಈಗಷ್ಟೆ ಹೊರಬಂದಿದೆ. ಶಿವಮೊಗ್ಗದಲ್ಲಿ ಇಂದು ಮತ್ತೆ 4 ಪ್ರಕರಣ ಪತ್ತೆಯಾಗಿವೆ. ಇದು ಅತ್ಯಂತ ಆತಂಕದ ಸಂಗತಿ. ಸಿಕ್ಕಿರುವ ನಾಲ್ಕರಲ್ಲಿನ 3 ಪ್ರಕರಣಗಳ ಸಂಪರ್ಕವೇ ಗೊತ್ತಾಗುತ್ತಿಲ್ಲ. ಜಿಲ್ಲೆಯ ಸೊಂಕಿತರ ಸಂಖ್ಯೆ ಈಗ 73ಕ್ಕೆ ಏರಿಕೆಯಾಗಿದೆ. ಸೊಂಕಿತರ ಸಂಖ್ಯೆ ಅರ್ಧ ಶತಕ ದಾಟಿ ಮುಂದೆ ಓಡೋಡಿ ಹೋಗುತ್ತಿದೆ. ಜಿಲ್ಲೆಯಲ್ಲಿ ಏಳು ಕ್ವಾರಂಟೈನ್ ಜೋನ್ ಗಳನ್ನ ಮಾಡಲಾಗಿದೆ. ಇಂತಹ ಕೆಲವೆಡೆ ಚಿಕ್ಕ ಗಲಾಟೆಗಳಾಗಿವೆ. ಹತ್ತು ಸಾವಿರಕ್ಕೂ ಹೆಚ್ಚು ಪರೀಕ್ಷೆಗಳಾಗಿವೆ. ಎಲ್ಲೆಡೆ ಈಗ ಅತಿ ಹೆಚ್ಚು ಪರಿಶೀಲನೆ ನಡೆಯತ್ತಿದೆ. ಸೊಂಕಿತರ ಹುಡುಕಾಟಕ್ಕೆ ವೈಯುಕ್ತಿಕ ಕಾಳಜಿಯೂ ಇರಲಿ. ಅನುಮಾನ ಎನಿಸಿದಾಕ್ಷಣ ಆಸ್ಪತ್ರೆಗೆ ಹೋಗುವುದು ಅತ್ಯಗತ್ಯ. ಎಚ್ಚರದ ಹೆಜ್ಜೆಯಷ್ಟೆ ನಮ್ಮದಾಗಿರಲಿ
ಹುಷಾರ್
ಬೀದಿಯಲ್ಲೇ ತಿಂಡಿ ಊಟ, ಪಾನಿಪುರಿ, ಗೋಬಿ,…. ಎಲ್ಲವೂ ಸಿಗುತ್ತಿದೆ. ಅಲ್ಲೇ ತಿನ್ನಬಹುದು. ನಮ್ಮ ವ್ಯವಸ್ಥೆ ನಗರದಲ್ಲಿ ಸೋತಿದೆ. ಎಚ್ಚರಿಕೆಯಷ್ಟೆ ನಮ್ಮದಾಗಿರಲಿ.
- ತುಂಗಾತರಂಗ ದಿನಪತ್ರಿಕೆ, ಶಿವಮೊಗ್ಗ. www.tungataranga.blogspot.com,
tungataranga.com