ಶಿವಮೊಗ್ಗ, ಇಲ್ಲಿನ ಗೋಪಾಳದಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಪ್ರತಿ ವರ್ಷದಂತೆ ಈ ವರ್ಷವೂ ಬರುವ ನವೆಂಬರ್ ೨೪ ಹಾಗೂ ೨೫ರಂದು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಿದೆ. ಈ ನಿಮಿತ್ತ “ಚಿನ್ನದ ಮಗುವಿಗೆ ಅಂದದ ಕೊಡುಗೆ, ಚಿಣ್ಣರ ಚಿಲುಮೆ ಹಾಗೂ ರಂಗೋತ್ಸವ ಕಾರ್ಯಕ್ರಮವನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ..
ಎರಡು ದಿನದ ವಿಶೇಷ ಕಾರ್ಯಕ್ರಮ ಇದಾಗಿದ್ದು, ನ. ೨೪ರ ಬೆಳಗ್ಗೆ ೧೦ ಗಂಟೆಗೆ ಶ್ರೀ ರಾಮಕೃಷ್ಣ ವಿವೇಕಾ ನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಮಹಾ ರಾಜ್ ಅವರ ಸಾನಿಧ್ಯದಲ್ಲಿ ಚಿಣ್ಣರ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಸಂಜೆ ೪.೩೦ಕ್ಕೆ ಚಿನ್ನದ ಚಿಲುಮೆ ಕಾರ್ಯಕ್ರಮ ನಡೆಯಲಿದ್ದು, ಬಸವ ತತ್ವ ಪೀಠದ ಡಾ. ಬಸವ ಮರುಳಸಿದ್ದ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರು ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದಾರೆ. ನ. ೨೫ರ ಸಂಜೆ ೪:೩೦ ರಿಂದ ನಡೆಯುವ ರಂಗೋತ್ಸವ ಕಾರ್ಯಕ್ರಮದಲ್ಲಿ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ಸಾನಿದ್ಯ ವಹಿಸಲಿದ್ದು,
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ. ಪ್ರಕಾಶ್ ಹಾಗೂ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ವಿ. ನಾಗರಾಜ್ ಆಗಮಿಸಿದ್ದು ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷ ಡಾ. ಡಿ ಆರ್ ನಾಗೇಶ್ ವಹಿಸಿದ್ದಾರೆ. ವಿಶೇಷವಾಗಿ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಕಲಿತ ಎಸ್ ಎಲ್ ಸಿ ಯ ಪ್ರತಿಭಾನ್ವಿತ ಮಕ್ಕಳಿಗೆ ಅವಾರ್ಡ್ ಗಳನ್ನು ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು ೧೫ಕ್ಕೆ ಹೆಚ್ಚು ಅವಾರ್ಡ್ ಗಳನ್ನು ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸರ್ವರನ್ನು ಆತ್ಮೀಯವಾಗಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಸ್ವಾಗತಿಸಿದ್ದಾರೆ