
ಸುದ್ದಿ, ಮತ್ತು ಜಾಹೀ944825683183
ಭದ್ರಾವತಿ,ನ.24:
ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆ ಶಿಕ್ಷಕನನ್ನ ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು.

ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
