ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಆದ? ಬೇಗನೆ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.


ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶರಾವತಿ ಸಂತ್ರಸ್ಥರ ಸಮಸ್ಯೆ ಇಂದು, ನಿನ್ನೆಯದಲ್ಲ. ಸುಮಾರು ೬೪ ವ?ಗಳ ಕಾಲ ಈ ಸಮಸ್ಯೆ ಇದೆ. ಕಾಂಗ್ರೆಸ್ ಸರ್ಕಾರ ಯಾವತ್ತೋ ಬಗೆಹರಿಸಬೇಕಾದ ಈ ಸಮಸ್ಯೆಯನ್ನು ಜೀವಂತವಾಗಿಟ್ಟುಕೊಂಡು ಈಗ ಸಂತ್ರಸ್ಥರ ಪರವಾಗಿ ಮೊಸಳೆ ಕಣ್ಣೀರು ಸುರಿಸುತ್ತಿದೆ. ಪಾದಯಾತ್ರೆ ಮಾಡಿರುವುದು ರಾಜಕೀಯ ಗಿಮಿಕ್ ಹೊರತೂ ರೈತರ ಪರವಾಗಿ ಅಲ್ಲ ಎಂದು ಟೀಕಿಸಿದರು.


೧೯೮೦ ರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದವರು ಅವರೇ. ಆಗ ಈ ಸಮಸ್ಯೆ ಬಗೆಹರಿಸಬಹುದಿತ್ತು. ೧೯೮೦ ರ ನಂತರವೂ ಅವರದೇ ಸರ್ಕಾರವಿತ್ತು. ಆಗಲಾದರೂ ಬಗೆಹರಿಸಬಹುದಿತ್ತು. ಆದರೆ, ಅವರಿಗೆ ಇಚ್ಛಾಶಕ್ತಿ ಇರಲಿಲ್ಲ. ಕಾಗೋಡು ತಿಮ್ಮಪ್ಪನವರೇ ಕಂದಾಯ ಸಚಿವರಾಗಿದ್ದರು. ಆಗಲೂ ಸಮಸ್ಯೆ ಬಗೆಹರಿಸಲಿಲ್ಲ. ೨೦೧೮ ರಲ್ಲಿ ನಿವೃತ್ತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಿತಿ ರಚಿಸಿದರು. ಅದರ ವರದಿಯ ನಂತರವೂ ಸರಿಯಾಗಿ ಗಮನಹರಿಸಲಿಲ್ಲ. ಸರ್ಕಾರದ ಆದೇಶವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾದ ಜವಾಬ್ದಾರಿ ಇತ್ತು. ಅದನ್ನೂ ಮಾಡಲಿಲ್ಲ. ಇಂತಹ ಹಲವು ತಪ್ಪುಗಳಿಂದ ಹೈಕೋರ್ಟ್ ಈಗ ಸಂತ್ರಸ್ಥರ ವಿರುದ್ಧವಾಗಿ ತೀರ್ಪು ನೀಡಿದೆ. ಇದಕ್ಕೆಲ್ಲಾ ಹೊಣೆ ಕಾಂಗ್ರೆಸ್. ಕಾಂಗ್ರೆಸ್ ನ ಪಾಪದ ಕೂಸು ಇದು ಎಂದರು.

ಕಾಂಗ್ರೆಸ್ ಮಾಡಿದ ತಪ್ಪನ್ನು ನಾವು ಬಗೆಹರಿಸುವ ನಿಟ್ಟಿನತ್ತ ಹೆಜ್ಜೆ ಹಾಕಿದ್ದೇವೆ. ೬೪ ವ?ಗಳಿಂದ ಪರಿಹರಿಸಲಾಗದ ಈ ಸಮಸ್ಯೆಯನ್ನು ಇದೀಗ ಬಿಜೆಪಿ ಸರ್ಕಾರ ಕೈಗೆತ್ತಿಕೊಂಡಿದೆ. ಮುಖ್ಯಮಂತ್ರಿಗಳು, ಜಿಲ್ಲೆಯವರೇ ಆದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಬಿ.ಎಸ್. ಯಡಿಯೂರಪ್ಪ ಅವರೆಲ್ಲರೂ ಈಗಾಗಲೇ ಕೇಂದ್ರದ ಜೊತೆ ಮಾತನಾಡಿದ್ದಾರೆ. ಅರಣ್ಯ ಮತ್ತು ಕಂದಾಯ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಇದಕ್ಕೊಂದು ಶಾಶ್ವತ ಪರಿಹಾರ ಕೊಡುವ ನಿಟ್ಟಿನಲ್ಲಿ ಕೇಂದ್ರಕ್ಕೆ ಮನವಿ ಮಾಡುತ್ತಿದ್ದಾರೆ.

ಆದ? ಬೇಗನೆ ಈ ಸಮಸ್ಯೆ ಬಗೆಹರಿಯುತ್ತದೆ ಎಂದರು.
ಬಿಜೆಪಿ ನಾಯಕರ ಕುರಿತು ಕಾಂಗ್ರೆಸ್ ನಾಯಕರು ಹಗುರವಾಗಿ ಮಾತನಾಡುತ್ತಿದ್ದಾರೆ. ಇದನ್ನು ಕೂಡಲೇ ಅವರು ನಿಲ್ಲಿಸಬೇಕು. ಧಂ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಗೊತ್ತಿರಲಿ, ರಾ?ದ ೧೬ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಕೃಷಿ ಸಮ್ಮಾನ್ ಯೋಜನೆಯ ಮೂಲಕ ರೈತರಿಗೆ ನಮ್ಮ ಸರ್ಕಾರ ನೆರವು ನೀಡುತ್ತಿದೆ. ರಾಜಕಾರಣಕ್ಕಾಗಿ ಏನೇನೋ ಮಾತನಾಡುವ ಕಾಂಗ್ರೆಸ್ ನವರು ಕೈಲಾಗದವರು ಮೈಪರಚಿಕೊಂಡಂತೆ ಮಾಡುತ್ತಿದ್ದಾರೆ ಎಂದು ಹಂಗಿಸಿದರು.


ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಕೂಡ ಬಗೆಹರಿಸಲಾಗುವುದು. ಜಿಲ್ಲೆಯಲ್ಲಿ ೮೦ ಸಾವಿರ ಅರ್ಜಿಗಳಿದ್ದು, ದೇಶದಲ್ಲಿ ೧೬ ಲಕ್ಷ ಅರ್ಜಿಗಳಿವೆ. ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ರೈತರ ಬಗ್ಗೆ ಪವಿತ್ರ ಭಾವನೆ ಇದೆ. ಜವಾಬ್ದಾರಿಯಿಂದ ನುಣುಚಿಕೊಳ್ಳುವುದಿಲ್ಲ. ಕಾಂಗ್ರೆಸ್ ನವರಂತೆ ರಾಜಕಾರಣವನ್ನೂ ಮಾಡುವುದಿಲ್ಲ. ರೈತ ಸಮುದಾಯಕ್ಕೆ ಸದಾ ಒಳ್ಳೆಯದನ್ನೇ ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿ?ತ್ ಸದಸ್ಯ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಇದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!