ಶಿವಮೊಗ್ಗ,
ಏಡ್ಸ್ ತಡೆಗಟ್ಟಲು ಮತ್ತು ನಿಯಂತ್ರಣಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಏಡ್ಸ್ ಕೂಡ ಈಗ ಮಾರಕ ರೋಗ ಅಲ್ಲ ಅದನ್ನು ನಿಯಂತ್ರಿಸಬಹುದಾಗಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶರಾದ ಮಲ್ಲಿಕಾರ್ಜುನ ಗೌಡ ಹೇಳಿದ್ದಾರೆ.

ಅವರು ಇಂದು ವಿಶ್ವ ಏಡ್ಸ್ ದಿನ ೨೦೨೨ ರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ, ಎಸ್ವಿಕೆ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಮತ್ತು ಕಟೀಲು ಅಶೋಕ್ಪೈ ಮೆಮೋರಿಯಲ್ ಕಾಲೇಜು ಶಿವಮೊಗ್ಗ ಹಾಗೂ

ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನ್ಯಾಯಾಲಯದ ಆವರಣದಿಂದ ಗೋಪಿವೃತ್ತದವರೆಗೆ ಹಮ್ಮಿಕೊಂ ಡಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಏಡ್ಸ್ ಬಂದರೆ ಯಾರು ಅವರನ್ನು ಸಂಪರ್ಕಿಸಬಾರದು. ಅವರನ್ನು ದೂರವಿಡಬೇಕು ಎಂಬ ತಪ್ಪು ಕಲ್ಪನೆಯಿತ್ತು. ಈಗ ಇಂತಹ ಜಾಗೃತಿ ಕಾರ್ಯಕ್ರಮಗಳ ಮೂಲಕ ಅ ಆತಂಕವನ್ನು ಬಹುಪಾಲು ಹೋಗಲಾಡಿಸಲಾಗಿದೆ. ಅತ್ಯಂತ ಪರಿಣಾಮಕಾರಿ ಔಷಧಗಳು ಬಂದಿದೆ. ನಿಯಂತ್ರಣ ಸ್ಥಿತಿಯಲ್ಲಿದೆ. ವೈದ್ಯರ ಸಲಹೆ ಸೂಚನೆ ಗಳು ಮತ್ತು ಆರೋಗ್ಯ ಇಲಾಖೆಯಿಂದ ಏಡ್ಸ್ ರೋಗಿಗಳಿಗೆ ಧೈರ್ಯ-ಸ್ಥೈರ್ಯ ತುಂಬಲು ಸಾಧ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾತನಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ಮಿಥುನ್ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಎನ್.ಡಿ.ಪ್ರಕಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣಸಂಕಣ್ಣನವರ್, ಡಿಹೆಚ್ಒ ರಾಜೇಶ್ ಸುರಗೀಹಳ್ಳಿ, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಮೆಗ್ಗಾನ್ ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ದಿನೇಶ್ ಜಿ.ಸಿ ಹಾಗೂ ಸಂಘಟನೆಗಳ ಪ್ರಮುಖರು ಇದ್ದರು.